ಬಳ್ಳಾರಿ,ಸೆ.17.. ಜಿಲ್ಲೆಯ ಶೈಕ್ಷಣಿಕ ಮತ್ತು ರಾಜಕೀಯ ಕ್ಷೇತ್ರಕ್ಕೆ ಅಲ್ಲಂ ಕುಟುಂಬ ಮಹತ್ವದ ಕೊಡುಗೆ ನೀಡಿದೆ ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಕೆ.ಎಸ್. ಶಿವಪ್ರಕಾಶ್ ತಿಳಿಸಿದರು.
ಅಲ್ಲಂ ಸುಮಂಗಳಮ್ಮ ಸ್ಮಾರಕ ಪದವಿ ವಿದ್ಯಾಲಯ ಹಾಗೂ ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತವಾಗಿ ಆಯೋಜಿಸಿದ್ದ ಶ್ರೀಮತಿ ಅಲ್ಲಂ ಸುಮಂಗಳಮ್ಮ ಮತ್ತು ಅಲ್ಲಂ ಕರಿಬಸಪ್ಪ ದತ್ತಿ ಹಾಗೂ ದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಲ್ಲಂ ಸುಮಂಗಳಮ್ಮನವರ ಜೀವನ ಮತ್ತು ಸಾಧನೆ ಕುರಿತಾಗಿ ಡಾ ಶಿವಪ್ರಕಾಶ್ ವಿಶೇಷ ಉಪನ್ಯಾಸ ನೀಡಿದರು.
ವೀ.ವಿ. ಸಂಘದ ಮಾಜಿ ಅಧ್ಯಕ್ಷರಾದ ಅಲ್ಲಂ ಗುರುಬಸವರಾಜ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ನಮ್ಮ ಬದುಕಿನ ಪ್ರತಿ ಕ್ಷಣವನ್ನೂ ಸಮಾಜಮುಖಿಯಾಗಿ ಬಳಿಸಿಕೊಂಡಾಗ ಮಾತ್ರ ಮಾನವರಾಗಿ ಹುಟ್ಟಿದ್ದು ಸಾರ್ಥಕವಾಗುತ್ತದೆ ಎಂದರು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಕಾತ್ಯಾಯನಿ ಮರಿದೇವಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಲಿಂ. ಅಲ್ಲಂ ಸುಮಂಗಳಮ್ಮನವರು ತಮ್ಮ ದೂರದರ್ಶಿತ್ವದ ವ್ಯಕ್ತಿತ್ವದ ಮೂಲಕ ಜಿಲ್ಲೆಯ ಶೈಕ್ಷಣಿಕ ಮತ್ತು ರಾಜಕೀಯ ಬೆಳವಣಿಗೆಗೆ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ವೀ.ವಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಅಲ್ಲಂ ಪ್ರಮೋದ್, ಟಿ. ಚೋರನೂರು ಕೊಟ್ರಪ್ಪ, ಕೆರೆನಹಳ್ಳಿ ಚಂದ್ರಶೇಖರ, ಅಂಗಡಿ ಬಸವರಾಜಪ್ಪ, ಡಾ. ಗಡಗಿ ಚೇತನಾ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗೋವಿಂದರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪದವಿ ಮಹಾವಿದ್ಯಾಲಯ ಪ್ರಾಂಶುಪಾಲರಾದ ಧೂಪಂ ಸತೀಶ್ ಸರ್ವರನ್ನು ಸ್ವಾಗತಿಸಿದರು. ಕಾರ್ಯಕ್ರಮವನ್ನು ಡಾ. ಬಸವರಾಜೇಶ್ವರಿ ನಿರೂಪಿಸಿದರು, ಡಾ. ಪಿ.ಜೆ. ಬಿಂದು ವಿಶೇಷ ಉಪನ್ಯಾಸಕರನ್ನು ಪರಿಚಯಿಸಿದರು. ಡಾ ಬಿ.ಎನ್. ಮಂಗಳಾ ವಂದಿಸಿದರು.