ಕಲಬುರಗಿ, ಸೆಪ್ಟೆಂಬರ್ 17: ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಇಂದು ಕಲ್ಯಾಣ ಕರ್ನಾಟಕ ಉತ್ಸವಆಚರಿಸಲಾಗುತ್ತಿದೆ. ಇದಕ್ಕಾಗಿಯೇ ಸಿಎಂ ಸಿದ್ದರಾಮಯ್ಯ ಕಲಬುರಗಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿರುವ ಅವರು, ಈ ಶುಭ ಸಂದರ್ಭದಲ್ಲಿ ಈ ಭಾಗದ ಅಭಿವೃದ್ದಿಗೋಸ್ಕರ ಕೆಕೆಆರ್ಡಿಬಿಗೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿದ್ದಾರೆ. ಜೊತೆಗೆ ಕೋಟ್ಯಂತರ ರೂ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಕಲಬುರಗಿ ಡಿಎಆರ್ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಭಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮಂಗಳವಾರ ನಡೆದ ಸಚಿವ ಸಂಪುಟದಲ್ಲಿ ಕೆಕೆಆರ್ಡಿಬಿಗೆ ಪ್ರತ್ಯೇಕ ಸಚಿವಾಲಯಕ್ಕೆ ತೀರ್ಮಾನ ಮಾಡಿದ್ದೇವೆ ಎಂದು ಹೇಳಿದ್ದಾರೆ.