ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು ಸಮೀಕ್ಷೆಯಿಂದ ಹೊರಗುಳಿಯಬೇಡಿ: ಜಿ.ಪದ್ಮಾವತಿ ಕರೆ

Ravi Talawar
ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು ಸಮೀಕ್ಷೆಯಿಂದ ಹೊರಗುಳಿಯಬೇಡಿ: ಜಿ.ಪದ್ಮಾವತಿ ಕರೆ
WhatsApp Group Join Now
Telegram Group Join Now
ವಿಜಯನಗರ (ಹೊಸಪೇಟೆ),  : ಜಿಲ್ಲೆಯಲ್ಲಿ ಮಾಜಿ ದೇವದಾಸಿ ಮಹಿಳೆಯರ ಸಮೀಕ್ಷೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಮೂಲ ಸಮೀಕ್ಷೆಯಲ್ಲಿ ಯಾರೋಬ್ಬರು ಹೊರಉಳಿಯದಂತೆ ಸೇರ್ಪಡೆಗೊಳಿಸಲು ಮಹಿಳಾ ಅಭಿವೃದ್ಧಿ ಅಧಿಕಾರಿಗಳು ಸಮನ್ವಯತೆಯಿಂದ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪದ್ಮಾವತಿ ಹೇಳಿದರು.
ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಜಿಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದರು,
ಅಧ್ಯಕ್ಷರು ಮಾತನಾಡಿ, ರಾಜ್ಯದಲ್ಲಿ ದೇವದಾಸಿ ಮಹಿಳೆಯರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ ನೀಡಿ ರಾಜ್ಯ ಸರ್ಕಾರದಿಂದ ನಿಗಮದಲ್ಲಿ ಅಂದಾಜು 70 ಲಕ್ಷ ರೂಗಳನ್ನು ಅನುದಾನ ಕಲ್ಪಿಸಲಾಗುವುದು. ಅರ್ಹ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಿದರೇ ಆರ್ಥಿಕ ಸಹಾಯ ಧನ ಬಿಡುಗಡೆಗೆ ಕ್ರಮವಹಿಸಲಾಗುವುದು. ದೇವದಾಸಿ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನದಲ್ಲಿರುವಂತೆ ಸರ್ಕಾರ ಪ್ರಾಶಸ್ತö್ಯ ನೀಡಲಾಗಿದೆ. ಈ ಹಿಂದೆ 1993-94 ಮತ್ತು 2007-08 ರಲ್ಲಿ ದೇವದಾಸಿ ಮಹಿಳೆಯರ ಸಮೀಕ್ಷೆ ನಡೆಸಿದ್ದು, ಆ ಸಮೀಕ್ಷೆಯಲ್ಲಿ ಮಾಜಿ ದೇವದಾಸಿಯರು ಕೈಬಿಟ್ಟು ಹೋಗಿದ್ದಲ್ಲಿ ಈಗ ನಡೆಯುವ ಮರು ಸಮೀಕ್ಷೆಯಲ್ಲಿ ಸೇರ್ಪಡೆ ಮಾಡಬೇಕು. ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜ್ಯ ಸರ್ಕಾರ ಸ್ವಾಭಿಮಾನಿ, ಸ್ವಾವಲಂಭಿಯಾಗಿ ಬದುಕು ನಿರ್ವಹಿಸಲು ಅನೇಕ ಅವಕಾಶಗಳನ್ನು ನೀಡಲಾಗುವುದು. ಹಾಗಾಗೀ ಸೆ.15 ರಿಂದ ಆರಂಭವಾಗಿರುವ 45 ದಿನಗಳ ಅವಧಿಯಲ್ಲಿ ಸಮೀಕ್ಷೆ ಕಾರ್ಯದಲ್ಲಿ ಉಪನಿರ್ದೇಶಕರು, ಶಿಶುಅಭಿವೃದ್ಧಿ ಅಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಸೇರಿ ವಿವಿಧ ಸಂಘ ಸಂಸ್ಥೆಗಳು ಕೈಜೋಡಿಸಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ನಿಗಮದಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳನ್ನು ಅರ್ಹ ಫಲಾನುಭವಿಗಳು ಸದ್ಭಳಕೆ ಮಾಡಿಕೊಳ್ಳಬೇಕು. ಸರ್ಕಾರದ ವಿವಿಧ ಯೋಜನೆಗಳಿಗೆ ಬ್ಯಾಂಕುಗಳಿAದ ಸಾಲ ಸೌಲಭ್ಯ ವಿತರಿಸಲು ಅನಗತ್ಯವಾಗಿ ದಾಖಲೆಗಳ ನೆಪಹೇಳಿ ಅಲೆದಾಡುಸುತ್ತಿರುವುದು ಹಾಗೂ ಸಾಲ ವಿತರಣೆಗೆ ವಿಳಂಬವಾಗುತ್ತಿರುವ ಬಗ್ಗೆ ಅನೇಕ ದೂರುಗಳು ಬಂದಿವೆ. ಲೀಡ್ ಬ್ಯಾಂಕು ವ್ಯವಸ್ಥಾಪಕರು ಕೂಡಲೇ ಪರಿಶೀಲಿಸಿ ವಿತರಣೆಗೆ ಮುಂದಾಬೇಕು ಎಂದರು. ನೊಂದ ಸಮುದಾಯಗಳ ಧ್ವನಿಯನ್ನು ರಾಜ್ಯ ಸರ್ಕಾರದ ಮಟ್ಟದಲ್ಲಿ ಮುಟ್ಟಿಸುವಂತಹ ಕೆಲಸವನ್ನು ಅಧಿಕಾರಿಗಳು ತಾತ್ಸಾರ ವಹಿಸದೇ ಕರ್ತವ್ಯ ನಿರ್ವಹಿಸಬೇಕು ಎಂದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ವೀರೇಂದ್ರ ಕುಮಾರ್ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಬ್ಯಾಂಕ್‌ಗಳಿAದ ಕೇವಲ ಒಂದು ತಿಂಗಳು ಅವಧಿಯಲ್ಲಿ ಸಾಲ ಸೌಲಭ್ಯಗಳನ್ನು ನೀಡಲು ಸೂಚಿಸಿದೆ. ಯಾವುದೇ ಬ್ಯಾಂಕಿನಲ್ಲಿ ಗ್ರಾಹಕರಿಗೆ, ಫಲಾನುಭವಿಗಳಿಗೆ ಸ್ಪಂದಿಸದಿರುವುದು, ಕಿರಿಕಿರಿ ಮಾಡಿದರೇ ನಿಖರವಾಗಿ ಬ್ಯಾಂಕಿನ ಮಾಹಿತಿಯನ್ನು ಸಂಬAಧಿಸಿದ ಇಲಾಖೆ ಅಧಿಕಾರಿಗಳಿಗೆ ನೀಡಿದರೇ ಅಂತಹ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಸೂಕ್ತ ಕ್ರಮ ವಹಿಸಲಾಗುತ್ತದೆ. ಪ್ರತಿ ವ್ಯಕ್ತಿಯ ಆರ್ಥಿಕ ಶಿಸ್ತು ಆಧರಿಸಿ ಬ್ಯಾಂಕುಗಳಲ್ಲಿ ಸಾಲ ಸೌಲಭ್ಯಗಳನ್ನು ನೀಡಲು ಮುಂದಾಗುತ್ತವೆ. ಕಂಪ್ಯೂಟರೈಸಡ್ ಬ್ಯಾಂಕಿAಗ್ ವ್ಯವಸ್ಥೆ ಇರುವುದರಿಂದ ಸಾಲ ನೀಡಲು ಕೆಲವು ದಾಖಲೆಗಳ ಕೊರತೆಯಿಂದಾಗಿ ಸಾಲ ನೀಡಲು ನಿರಾಕರಿಸಿ ವಿಳಂಬವಾಗಿರಬಹುದು ಹೊರತಾಗಿ ಎಲ್ಲಾ ಬ್ಯಾಂಕುಗಳಲ್ಲಿ ಸರ್ಕಾರಿ ಯೋಜನೆಗಳ ಫಲಾನುಭವಿಗಳಿಗೆ ಆರ್ಥಿಕ ಸಹಾಯ ನೀಡಲಾಗುತ್ತದೆ. ಸರ್ಕಾರಿ ಯೋಜನೆಗಳಿಂದ ಸಾಲ ಪಡೆದ ಮೇಲೆ ನಿಗಧಿತ ವೇಳೆ ಮರುಸಾಲ ಪಾವತಿ ಮಾಡುವುದರಿಂದ ಅವರ ಸಿಬಿಲ್ ಸ್ಕೋರ್ ಸಮತೋಲನ ಕಾಯ್ದುಕೊಳ್ಳಬಹುದಾಗಿದೆ. ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತೆಯಡಿಯಲ್ಲಿನ ವಿಮೆ ಯೋಜನೆಯನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.
ಕರ್ನಾಟಕ ರಾಜ್ಯ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಅಕ್ಕಮಹಾದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಸ್.ಶ್ವೇತಾ, ಜಿಲ್ಲಾ ನಿರೂಪಣಾಧಿಕಾರಿ ಹೆಚ್.ಮುದುಕಪ್ಪ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ವೀರೇಂದ್ರ ಕುಮಾರ್, ನಿಗಮದ ಅಭಿವೃದ್ಧಿ ನೀರಿಕ್ಷರಾದ ಸುಧಾ ಚಿದ್ರಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

WhatsApp Group Join Now
Telegram Group Join Now
Share This Article