ನವದೆಹಲಿ, ಸೆಪ್ಟೆಂಬರ್ 18: ಕರ್ನಾಟಕದ ಕಲಬುರಗಿಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಹಿಂದೆ ಮಹದೇವಪುರ ಕ್ಷೇತ್ರದಲ್ಲಿ ಕೂಡ ಮತಗಳ್ಳತನವಾಗಿದ್ದ ಕುರಿತು ಮಾಹಿತಿ ನೀಡಿದ್ದರು.
ಹಾಗಾದರೆ ಈ ಮತಗಳ್ಳತನ ಸಿಕ್ಕಿಬಿದ್ದಿದ್ದು ಹೇಗೆ ಎಂದರೆ, ಆಳಂದದಲ್ಲಿ ಬಿಎಲ್ಒ ಅವರ ಸಂಬಂಧಿಯ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿತ್ತು. ಆಗ ತನಿಖೆ ಆರಂಭಿಸಿದಾಗ ಅವರ ಸಂಬಂಧಿಯ ಪಕ್ಕದ ಮನೆಯವರು ಅವರ ಹೆಸರನ್ನು ತೆಗೆಸಿದ್ದಾರೆ ಎಂಬುದು ತಿಳಿದುಬಂದಿತ್ತು, ಬಳಿಕ ಅಲ್ಲಿ ಹೋಗಿ ವಿಚಾರಿಸಿದಾಗ ನಾವು ಅರ್ಜಿ ಕೊಟ್ಟಿಲ್ಲ, ಯಾರ ಹೆಸರನ್ನೂ ತೆಗೆಸಿಲ್ಲ ಎಂದು ಹೇಳಿದಾಗ ಕೆಲವು ವಿಚಾರಗಳು ಬಹಿರಂಗಗೊಂಡಿವೆ.