ಗದಗ ಸೆಪ್ಟೆಂಬರ್ 18: ರಾಜ್ಯದ ಮಾನ್ಯಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 20 ರಂದು ಬೆಳಿಗ್ಗೆ 11.10 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 11.25 ಗಂಟೆಗೆ ಗದಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಹೆಲಿಪ್ಯಾಡ್‌ಗೆ ಆಗಮಿಸುವರು. ನಂತರ ನಗರದ ಮುಳಗುಂದ ರಸ್ತೆಯ ಕನಕ ಭವನದ ಶ್ರೀ ರಾಕೇಶ ಸಿದ್ದರಾಮಯ್ಯ ಸಭಾಂಗಣದಲ್ಲಿ ಗದಗ ತಾಲೂಕು ಕುರುಬರ ಸಂಘ (ರಿ) ಗದಗ ವತಿಯಿಂದ ಆಯೋಜಿಸಿರುವ “ ತಾಲೂಕು ಸಂಘದ ರಜತ ಮಹೋತ್ಸವ ಸವಿನೆನಪಿಗಾಗಿ ಸ್ಮರಣ ಸಂಚಿಕೆ ಬಿಡುಗಡೆ ” ರಾಜ್ಯ ಮಟ್ಟದ ಕನಕೋತ್ಸವ ಹಾಗೂ ಸಂಘಜೀವಿ ಶ್ರೀ ಫಕೀರಪ್ಪ ಹೆಬಸೂರ ಅವರ ಅಭಿನಂದನಾ ಗ್ರಂಥ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3.30 ಗಂಟೆಗೆ ಗದಗ ಜಿಲ್ಲಾಧಿಕಾರಿಗಳ ಕಚೇರಿ ಆವರಣ ಹೆಲಿಪ್ಯಾಡ್‌ದಿಂದ ಹೆಲಿಕಾಪ್ಟರ್ ಮುಖಾಂತರ ಹುಬ್ಬಳ್ಳಿಗೆ ಪ್ರಯಾಣಿಸಿ ನಂತರ ಬೆಂಗಳೂರಿಗೆ ಹೊರಡುವರು.