ಬೆಂಗಳೂರು, ಸೆಪ್ಟೆಂಬರ್ 19: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ವಿಚಾರಣೆ ಮಾಡಿ ಈ ಪ್ರಕರಣವನ್ನು ವಜಾಗೊಳಿಸಿದೆ.
ಬೆಂಗಳೂರು ನಿವಾಸಿ ಹೆಚ್.ಎಸ್.ಗೌರವ್ ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪಿ.ಬಿ. ಸುರೇಶ್ ವಾದ ಮಂಡಿಸಿದ್ದು, ಹಿಂದೂಯೇತರ ವ್ಯಕ್ತಿಗೆ ಪೂಜೆ ಮಾಡಲು ಅವಕಾಶ ನೀಡಲಾಗುವುದಿಲ್ಲ ಎಂದಿದ್ದಾರೆ.