ದೆಹಲಿಯಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ

Ravi Talawar
ದೆಹಲಿಯಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ
WhatsApp Group Join Now
Telegram Group Join Now

ದೆಹಲಿ, ಸೆಪ್ಟೆಂಬರ್ 20: ದೆಹಲಿಯಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಮುಂದುವರೆದಿದೆ. ದ್ವಾರಕ ಡಿಪಿಎಸ್ ಸೇರಿದಂತೆ ಹಲವು ಶಾಲೆಗಳಿಗೆ ದುಷ್ಕರ್ಮಿಗಳಿಂದ ಇ-ಮೇಲ್ ಮೂಲಕ​ ಬಾಂಬ್​ ಬೆದರಿಕೆ ಸಂದೇಶ ರವಾನಿಸಲಾಗಿದೆ. ಬಾಂಬ್ ಬೆದರಿಕೆ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸ್ಥಳಾಂತರ ಮಾಡಲಾಗಿದೆ. ಶಾಲೆಗಳಲ್ಲಿ ಬಾಂಬ್ ಪತ್ತೆ ದಳ ಹಾಗೂ ಶ್ವಾನ ದಳದಿಂದ ಪರಿಶೀಲನೆ ಮಾಡಲಾಗುತ್ತಿದೆ.

ದೆಹಲಿಯ ಶಾಲೆಗಳಿಗೆ ಸರಣಿ ಬಾಂಬ್ ಬೆದರಿಕೆಗಳು ಬರುತ್ತಿವೆ. ಕಳೆದ 8 ತಿಂಗಳಲ್ಲಿ 150ಕ್ಕೂ ಹೆಚ್ಚು ಶಾಲಾ-ಕಾಲೇಜುಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿವೆ. ಸದ್ಯ ದೆಹಲಿ ಪೊಲೀಸರಿಗೆ ಈ ಬಾಂಬ್ ಬೆದರಿಕೆ ಸಂದೇಶಗಳು ತಲೆನೋವಾಗಿ ಪರಿಣಮಿಸಿದೆ.

 

WhatsApp Group Join Now
Telegram Group Join Now
Share This Article