ಬೆಳಗಾವಿ- ಕೇಂದ್ರ ಬಸವ ಸಮಿತಿ ಬೆಂಗಳೂರು ಇವರ ವತಿಯಿಂದ ಕನ್ನಡ ರಾಜ್ಯೋತ್ಸವ ನಿಮಿತ್ತ ಕಿತ್ತೂರ ಚೆನ್ನಮ್ಮಾಜಿಯವರ ಐಕ್ಯ ಕ್ಷೇತ್ರವಾದ ಬೈಲಹೊಂಗಲ ಪಟ್ಟಣದಲ್ಲಿ ನವೆಂಬರ ತಿಂಗಳಲ್ಲಿ ರಾಜ್ಯ ಮಟ್ಟದ ಕವಿಗೋಷ್ಠಿ ಅಯೋಜಿಸಲಾಗಿದೆ.
ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆಯ ಕುರಿತು, ಅನ್ನ ನೀಡುವ ಅನ್ನದಾತ ಹಾಗೂ ದೇಶ ಕಾಯುವ ಯೋಧರ ಕುರಿತು, ಕರ್ನಾಟಕದ ಸಾಂಸ್ಕೃತಿಕ ನಾಯಕ, ಮಹಾನ್ ದಾರ್ಶನಿಕ ಬಸವಣ್ಣ, ಇತರ ಶರಣರ ಕುರಿತು ಮತ್ತು ಶರಣ ಸಂಸ್ಕೃತಿಯನ್ನು ಉಳಿಸಲು, ಬೆಳೆಸಲು ಶ್ರಮಿಸಿದವರ ಕುರಿತು ಕವನಗಳನ್ನು ಆಹ್ವಾನಿಸಲಾಗಿದೆ.
ಕವನ 30 ಸಾಲುಗಳಿಗೆ ಮಿಕ್ಕದಂತೆ ಕಾಗದದ ಒಂದೇ ಮಗ್ಗುಲಲ್ಲಿ ಬರೆದು ಅಥವಾ ಡಿಟಿಪಿ ಮಾಡಿಸಿ, ಸ್ವವಿಳಾಸ, ಕಿರು ಪರಿಚಯ, ಭಾವಚಿತ್ರ, ವಾಟ್ಸಪ್ ಮೊಬೈಲ್ ಸಂಖ್ಯೆಯೊಂದಿಗೆ ಅಕ್ಟೋಬರ್ 15ರ ಒಳಗಾಗಿ ಶ್ರೀ ಮೋಹನ ಬಸನಗೌಡ ಪಾಟೀಲ, ಕಾರ್ಯಕಾರಿ ಸಮಿತಿಯ ಹಿರಿಯ ಸದಸ್ಯರು, ” ಬಸವ ನಿವಾಸ”, ಚನ್ನಮ್ಮ ನಗರ ಮೊದಲನೆಯ ಅಡ್ಡರಸ್ತೆ, ಬೈಲಹೊಂಗಲ-591102, ಬೆಳಗಾವಿ ಜಿಲ್ಲೆ. ಈ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ ಕಳಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9448920888 ಸಂಪರ್ಕಿಸಬೇಕೆಂದು ಕೇಂದ್ರ ಬಸವ ಸಮಿತಿಯ ಅಧ್ಯಕ್ಷರಾದ ಡಾ. ಅರವಿಂದ ಜತ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.