ಬೆಂಗಳೂರು, ಸೆಪ್ಟೆಂಬರ್ 22: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಪತ್ನಿಗೆ ಡಿಜಿಟಲ್ ಅರೆಸ್ಟ್ (Digital arrest) ಮಾಡಿ ವಂಚಕರು ಬರೋಬ್ಬರಿ 14 ಲಕ್ಷ ರೂ ಹಣ ದೋಚಿರುವಂತಹ ಘಟನೆ ಬೆಳಕಿಗೆ ಬಂದಿದೆ. ಆ.26ರಂದೇ ಪಶ್ಚಿಮ ಸೈಬರ್ ಠಾಣೆಗೆ ಡಾ.ಪ್ರಿಯಾ ದೂರು ನೀಡಿದ್ದರು. ಗೋಲ್ಡನ್ ಅವರ್ನಲ್ಲಿ ದೂರು ನೀಡಿದ್ದರಿಂದ 14 ಲಕ್ಷ ರೂ ಹಣ ಕೂಡ ವಾಪಸ್ ಬಂದಿದೆ. ಸದ್ಯ ಸೈಬರ್ ವಂಚಕರ ಜಾಲ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಸಂಸದ ಡಾ.ಕೆ.ಸುಧಾಕರ್ ಪತ್ನಿಗೆ ಡಿಜಿಟಲ್ ಅರೆಸ್ಟ್ ; 14 ಲಕ್ಷ ರೂ ಹಣ ವಂಚನೆ

ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಪತ್ನಿ ಡಾ.ಪ್ರಿಯಾ ಅವರಿಗೆ ಆಗಸ್ಟ್ 26ರಂದು ಸೈಬರ್ ವಂಚಕರಿಂದ ಫೋನ್ ಕಾಲ್ ಬಂದಿದೆ. ನಾವು ಮುಂಬೈ ಸೈಬರ್ ಡಿಪಾರ್ಟ್ಮೆಂಟ್ ಸಿಬ್ಬಂದಿ ಎಂದು ಹೇಳಿಕೊಂಡು ವಂಚಿಸಿದ್ದಾರೆ.
ಅಪರಿಚಿತ ವ್ಯಕ್ತಿಯೊಬ್ಬ ನಿಮ್ಮ ದಾಖಲೆಗಳನ್ನು ಬಳಸಿಕೊಂಡಿದ್ದಾರೆ. ನಿಮ್ಮ ಹೆಸರಲ್ಲಿ ಕ್ರೆಡಿಟ್ ಕಾರ್ಡ್ ಮಾಡಿಸಿ ಅಕ್ರಮವಾಗಿ ವರ್ಗಾವಣೆ ಮಾಡಿದ್ದಾನೆ ಎಂದು ಸೈಬರ್ ವಂಚಕರು ಕಥೆ ಕಟ್ಟಿದ್ದಾರೆ ಎನ್ನಲಾಗುತ್ತಿದೆ.