ನಾಳೆ ಉಮೇಶ ಕತ್ತಿ ಗ್ರಂಥ ಲೋಕಾರ್ಪಣೆ

Ravi Talawar
ನಾಳೆ ಉಮೇಶ ಕತ್ತಿ ಗ್ರಂಥ ಲೋಕಾರ್ಪಣೆ
WhatsApp Group Join Now
Telegram Group Join Now
ಹುಕ್ಕೇರಿ : ಉತ್ತರ ಕರ್ನಾಟಕದ ಕನಸುಗಾರ ದಿ.ಉಮೇಶ ಕತ್ತಿ ಅವರ ಗ್ರಂಥ ಲೋಕಾರ್ಪಣೆ ಸಮಾರಂಭವು  ನಾಳೆ ಬುಧವಾರ  ಸೆ. ೨೪ ರಂದು ಬೆಳಗ್ಗೆ ೧೧ ಕ್ಕೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ವಿಶ್ವರಾಜ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ನಿಡಸೋಸಿ ಸಿದ್ದಸಂಸ್ಥಾನ ಮಠದ ಪಂಚಮ ಡಾ.ಶಿವಲಿಂಗೇಶ್ವರ ಸ್ವಾಮೀಜಿ, ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ವಿರಕ್ತಮಠದ ಶಿವಾನಂದ ಸ್ವಾಮೀಜಿ, ಶಿವಬಸವ ಸ್ವಾಮೀಜಿ, ಕ್ಯಾರಗುಡ್ ಅವುಜೀಕರ ಆಶ್ರಮದ ಅಭಿನವ ಮಂಜುನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು. ದೆಹಲಿ ವಿಶೇಷ ಪ್ರತಿನಿಧಿಯೂ ಆದ ಎಂಎಲ್‌ಸಿ ಪ್ರಕಾಶ ಹುಕ್ಕೇರಿ ಅಧ್ಯಕ್ಷತೆ ವಹಿಸುವರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಜ್ಯೋತಿ ಪ್ರಜ್ವಲಿಸುವರು. ಮಾಜಿ ಸಚಿವ ಎ.ಬಿ.ಪಾಟೀಲ ಕಿರುಚಿತ್ರ ಬಿಡುಗಡೆಗೊಳಿಸುವರು. ಮಾಜಿ ಸಿಎಂ ಜಗದೀಶ ಶೆಟ್ಟರ ಗ್ರಂಥ ಬಿಡುಗಡೆ ಮಾಡುವರು.
ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಸಂಸದರಾದ ಗೋವಿಂದ ಕಾರಜೋಳ, ಈರಣ್ಣಾ ಕಡಾಡಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಲಕ್ಷ್ಮಣ ಸವದಿ, ಬಸನಗೌಡ ಪಾಟೀಲ ಯತ್ನಾಳ, ರಾಜು ಕಾಗೆ, ಅಶೋಕ ಪಟ್ಟಣ, ಅಭಯ ಪಾಟೀಲ, ಗಣೇಶ ಹುಕ್ಕೇರಿ, ದುರ್ಯೋದನ ಐಹೊಳೆ, ಬಾಬಾಸಾಹೇಬ ಪಾಟೀಲ, ಮಹಾದೇವಪ್ಪ ಯಾದವಾಡ, ಮಹಾಂತೇಶ ಕೌಜಲಗಿ, ರಾಜು ಶೇಠ್, ವಿಶ್ವಾಸ ವೈದ್ಯ, ಮಾಜಿ ಶಾಸಕರಾದ ಮಹಾಂತೇಶ ಕವಟಗಿಮಠ, ಮುರುಗೇಶ ನಿರಾಣಿ, ಸಿ.ಟಿ.ರವಿ ಮತ್ತಿತರರು ಅತಿಥಿಗಳಾಗಿ ಆಗಮಿಸುವರು.
ವಿಶ್ವನಾಥ ಕತ್ತಿ ಧರ್ಮಾರ್ಥ ಟ್ರಸ್ಟ್, ರಾಜೇಶ್ವರಿ ಕತ್ತಿ ಧರ್ಮಾರ್ಥ ಟ್ರಸ್ಟ್ ಹಾಗೂ ಉಮೇಶ ಕತ್ತಿ ಅಭಿಮಾನಿಗಳ ಬಳಗದಿಂದ ಈ ಸಮಾರಂಭ ಆಯೋಜಿಸಲಾಗಿದ್ದು ತಾಲೂಕು, ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮಾರಂಭ ಯಶಸ್ವಿಗೊಳಿಸಬೇಕು ಎಂದು ಮಾಜಿ ಸಂಸದ ರಮೇಶ ಕತ್ತಿ, ಶಾಸಕ ನಿಖಿಲ್ ಕತ್ತಿ, ಯುವ ಮುಖಂಡರಾದ ಪೃಥ್ವಿ ಕತ್ತಿ, ಪವನ ಕತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article