ನಾಗಮೋಹನ್ ದಾಸ್ ಆಯೋಗ ದಿಢೀರ್ ರದ್ದು!

Ravi Talawar
ನಾಗಮೋಹನ್ ದಾಸ್ ಆಯೋಗ ದಿಢೀರ್ ರದ್ದು!
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್ 25: ಕರ್ನಾಟಕದಲ್ಲಿ 2019 ರಿಂದ 2023ರವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗುವ ಹಗರಣಗಳ, ಅದರಲ್ಲೂ ಕೋವಿಡ್ ಸಾಂಕ್ರಾಮಿಕದ ವೇಳೆ ನಡೆದಿತ್ತು ಎನ್ನಲಾದ ಬಹುಕೋಟಿ ರೂಪಾಯಿ ಹಗರಣದ ತನಿಖೆಗೆಂದು ಕಾಂಗ್ರೆಸ್ ಸರ್ಕಾರ ಆಯೋಗ ರಚನೆ ಮಾಡಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗ ರಚನೆಯಾಗಿತ್ತು. ಇದೀಗ ಆ ಆಯೋಗದ ಅವಧಿ ಮುಗಿಯುವುದಕ್ಕೂ ಮುನ್ನವೇ ವಿಸರ್ಜನೆ ಮಾಡಲಾಗಿದೆ. ಸೆಪ್ಟೆಂಬರ್ 30 ರವರೆಗೆ ಅಧಿಕಾರ ಅವಧಿ ವಿಸ್ತರಿಸುವಂತೆ ಆಯೋಗ ಮನವಿ ಮಾಡಿತ್ತು. ಅದನ್ನು ಸರ್ಕಾರ ಪರಿಗಣಿಸಿಲ್ಲ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಕಾಮಗಾರಿಗಳಲ್ಲಿ ಅಕ್ರಮದ ಬಗ್ಗೆ ತನಿಖೆ ನಡೆಸಿದ್ದ ಆಯೋಗ, ಆಗಸ್ಟ್ 30 ರಂದು ಸರ್ಕಾರಕ್ಕೆ 8,900 ಪುಟಗಳ ಬೃಹತ್ ತನಿಖಾ ವರದಿಯನ್ನು ಸಲ್ಲಿಸಿತ್ತು. 761 ಕಾಮಗಾರಿಗಳನ್ನು ಪರಿಶೀಲಿಸಿ ಹಲವು ನ್ಯೂನತೆಗಳನ್ನು ಪತ್ತೆಹಚ್ಚಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿತ್ತು. ಏಕ ಸದಸ್ಯ ಆಯೋಗದ ಕೆಲಸ ಮುಗಿದಿದ್ದರೂ ಕೆಲವು ಆಡಳಿತಾತ್ಮಕ ಕಾರ್ಯ ಹಾಗೂ ದಾಖಲೆ ನಿರ್ವಾಹಣೆಗಾಗಿ ಸೆ.30 ರ ವರೆಗೆ ಅವಧಿ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು ಎನ್ನಲಾಗಿದೆ. ಆದರೆ, ಸರ್ಕಾರ ಆಯೋಗಕ್ಕೆ ನೀಡಿದ್ದ ಎಲ್ಲಾ ಸವಲತ್ತುಗಳನ್ನು ಏಕಾಏಕಿ ವಾಪಸ್ ಪಡೆದಿದೆ ಎನ್ನಲಾಗುತ್ತಿದೆ.

WhatsApp Group Join Now
Telegram Group Join Now
Share This Article