ಮೈಸೂರು, ಸೆಪ್ಟೆಂಬರ್ 26: ಕನ್ನಡದ ಮೇರು ಸಾಹಿತಿ, ಕಾದಂಬರಿಕಾರ, ಪದ್ಮಭೂಷಣ ಡಾ. ಎಸ್ಎಲ್ ಭೈರಪ್ಪ ಅವರು ಶುಕ್ರವಾರ ಪಂಚಭೂತಗಳಲ್ಲಿ ಲೀನರಾದರು. ಅಂತ್ಯಸಂಸ್ಕಾರದಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಕೇಂದ್ರದ ಪ್ರತಿನಿಧಿಯಾಗಿ ಭಾಗವಹಿಸಿ ಕೇಂದ್ರ ಸರ್ಕಾರದ ಪರವಾಗಿ ಅಂತಿಮ ನಮನ, ಗೌರವಾರ್ಪಣೆ ಸಲ್ಲಿಸಿದರು.
ಅನಾರೋಗ್ಯ ಅಂತಾ ಆಸ್ಪತ್ರೆ ಸೇರಿದ್ದ ಸಾಹಿತಿ ಎಸ್.ಎಲ್.ಭೈರಪ್ಪ ಹೃದಯಾಘಾತದಿಂದ ಸೆ. 24ರಂದು ವಿಧಿವಶರಾದರು. ಸದ್ಯ ಮೈಸೂರಿನ ಚಾಮುಂಡಿ ತಪ್ಪಲಿನ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಪಂಚಭೂತಗಳಲ್ಲಿ ಲೀನರಾಗಿದರು. ಸಕಲ ಸರ್ಕಾರಿ ಗೌರವದೊಂದಿಗೆ ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ ನೆರವೇರಿಸಲಾಗಿದೆ.