ಶೀಘ್ರದಲ್ಲೇ ಬೆಂಗಳೂರು ಟು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಆರಂಭ: ಅಶ್ವಿನಿ ವೈಷ್ಣವ್

Ravi Talawar
ಶೀಘ್ರದಲ್ಲೇ ಬೆಂಗಳೂರು ಟು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಆರಂಭ: ಅಶ್ವಿನಿ ವೈಷ್ಣವ್
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್​ 27: ಈಗಾಗಲೇ ಮುಂಬೈ ಟು ಅಹಮದಾಬಾದ್‌ ಮಧ್ಯೆ ಬುಲೆಟ್ ರೈಲು ಯೋಜನೆಯ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಹೀಗಿರುವಾಗ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕದ ಜನರಿಗೆ ಗುಡ್​ ನ್ಯೂಸ್​​ ನೀಡಿದ್ದಾರೆ. ಅದೇನೆಂದರೆ ಬೆಂಗಳೂರು ಟು ಮುಂಬೈಗೆ ಸೂಪರ್‌ ಫಾಸ್ಟ್ ರೈಲು ಘೋಷಣೆ ಮಾಡಿದ್ದಾರೆ. ಆ ಮೂಲಕ 30 ವರ್ಷಗಳ ಬೇಡಿಕೆ ಈಡೇರಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸಂತಸ ವ್ಯಕ್ತಪಡಿಸಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಸಚಿವ ಅಶ್ವಿನಿ ವೈಷ್ಣವ್​​, ಶೀಘ್ರದಲ್ಲೇ ನಾವು ಬೆಂಗಳೂರು ಟು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಪ್ರಾರಂಭಿಸುತ್ತೇವೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿವೆ. ಹಾಗಾಗಿ ಇದು ಪ್ರಮುಖವಾಗಿದೆ ಎಂದು ಹೇಳಿದರು.

WhatsApp Group Join Now
Telegram Group Join Now
Share This Article