ಬಳ್ಳಾರಿ: ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಿಸಲು, ಪದವಿ ವಿದ್ಯಾರ್ಥಿಗಳ ತರಗತಿ ಬಹಿಷ್ಕಾರ ಹೋರಾಟಕ್ಕೆ ಕರೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ಸರಳಾದೇವಿ ಕಾಲೇಜು, ಸಿಟಿ ಕಾಲೇಜ್ ಹಾಗೂ ಸರ್ಕಾರಿ ಮಹಿಳಾ ಕಾಲೇಜುಗಳು ಸಂಪೂರ್ಣವಾಗಿ ತರಗತಿ ಬಹಿಷ್ಕಾರ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಅವರು ಮಾತನಾಡಿ.ಒಂದೂ ತರಗತಿ ನಡೆಯದ ನೂರಾರು ಸರ್ಕಾರಿ ಪದವಿ ಕಾಲೇಜುಗಳ ಒಂದೆಡೆ, ಎರಡು ಘಟಕ ಪರೀಕ್ಷೆಗಳನ್ನು ಮುಗಿಸಿ, ಸೆಮಿಸ್ಟರ್ ಪರೀಕ್ಷೆಯ ತಯಾರಿಯಲ್ಲಿರುವ ಖಾಸಗಿ ಪದವಿ ಕಾಲೇಜುಗಳು ಮತ್ತೊಂದೆಡೆ!
ಈ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಿಸಲು ಒತ್ತಾಯಿಸಿ, ರಾಜ್ಯವ್ಯಾಪಿ ಸರ್ಕಾರಿ ಪದವಿ ವಿದ್ಯಾರ್ಥಿಗಳ ತರಗತಿ ಬಹಿಷ್ಕಾರ. ನಮ್ಮ ಜಿಲ್ಲೆಯ… ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸ್ವಯಂಪ್ರೇರಿತರಾಗಿ ತರಗತಿ ಬಹಿಷ್ಕರಿಸಿ ಸರ್ಕಾರದ ಧೋರಣೆಯ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಹೋರಾಟದ ಮುಂದಿನ ನಡೆಯಾಗಿ, ತರಗತಿ ನಡೆಸದೆ ಪರೀಕ್ಷೆ ಬೇಡ ಎಂಬ ಘೋಷ್ ವಾಕ್ಯದೊಂದಿಗೆ ರಾಜ್ಯದಾದ್ಯಂತ ಸಂಘರ್ಷ ನಡೆಸಲು ವಿದ್ಯಾರ್ಥಿಗಳು ಇಂದು ತರಗತಿ ಬಹಿಷ್ಕಾರದ ಹಿನ್ನಲೆಯನ್ನು, ತೀರ್ಮಾನಿಸಿದ್ದಾರೆ. ಅತಿಥಿ ಉಪನ್ಯಾಸಕರಿಲ್ಲದೇ, ಒಂದೂ ತರಗತಿ ನಡೆಯದಿದ್ದರೂ ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿ ಮತ್ತು ಪರೀಕ್ಷಾ ಶುಲ್ಕದ ಸುತ್ತೋಲೆ ಹೊರಡಿಸಿರುವ ವಿವಿಗಳ ಧೋರಣೆ ಖಂಡನೀಯ. ಸರ್ಕಾರಿ ವಿವಿಗಳು ಖಾಸಗಿ ಪದವಿ ಕಾಲೇಜುಗಳಿಗೆ ಮಾತ್ರವೇ ಇರುವುದೇ ಎಂಬ ಪ್ರಶ್ನೆ ಮೂಡುತ್ತದೆ. ಆದ್ದರಿಂದ ನಮ್ಮ ಹೋರಾಟ ಮುಂದುವರೆಯುತ್ತಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಅಧ್ಯಕ್ಷರು ಕೆ.ಈರಣ್ಣ, ಉಪಾಧ್ಯಕ್ಷೆ ಎಂ.ಶಾಂತಿ, ಹಾಗೂ ವಿದ್ಯಾರ್ಥಿಗಳು ಸೋಮಶೇಖರ್ ಮತ್ತು ಇತರರು


