ನವದೆಹಲಿ: ಗಾಜಾ ಸಂಘರ್ಷವನ್ನು ಕೊನೆಗೊಳಿಸುವ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯೋಜನೆಯನ್ನು ಸ್ವಾಗತಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಇದರಿಂದ ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ಜನರಿಗೆ ಹಾಗೂ ಪಶ್ಚಿಮ ಏಷ್ಯಾ ಪ್ರದೇಶಗಳಲ್ಲಿ ದೀರ್ಘಕಾಲೀನ ಶಾಂತಿ, ಭದ್ರತೆ ಮತ್ತು ಅಭಿವೃದ್ಧಿಗೆ ಕಾರ್ಯಸಾಧ್ಯವಾದ ಮಾರ್ಗ ತೆರೆಯಲಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸಮ್ಮುಖದಲ್ಲಿ ಟ್ರಂಪ್ ಈ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಎಲ್ಲರೂ ಒಗ್ಗೂಡಿ ಸಂಘರ್ಷ ಕೊನೆಗೊಳಿಸಿ, ಶಾಂತಿಯನ್ನು ಭದ್ರಪಡಿಸುವ ಪ್ರಯತ್ನವನ್ನು ಬೆಂಬಲಿಸಲಾಗುವುದು ಎಂದಿದ್ದಾರೆ.