ಬಳ್ಳಾರಿ. ಸೆ. 30.: ಗಾಣಿಗ ಜನಾಂಗಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಜಾತಿ ಪ್ರಮಾಣ ಪತ್ರವನ್ನು ನೀಡುತ್ತಿಲ್ಲ ಇದರಿಂದ ನಮ್ಮ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನಕ್ಕೆ ಮತ್ತು ನಮ್ಮ ಜನಾಂಗದ ಬಡ ಜನತೆಗೆ ಸರ್ಕಾರಿ ಯೋಜನೆಗಳನ್ನು ಪಡೆಯಲು ತುಂಬಾ ಅನಾನುಕೂಲವಾಗಿದೆ ಕಾರಣ ತಾವುಗಳು ಬಳ್ಳಾರಿ ಜಿಲ್ಲೆಯ ಗಾಣಿಗ ಸಮಾಜಕ್ಕೆ ಜಾತಿ ಪ್ರಮಾಣ ಪತ್ರವನ್ನು ಪಡೆಯಲು ಇರುವ ಸಮಸ್ಯೆಯನ್ನು ಪರಿಹರಿಸಿ ಜಾತಿ ಪ್ರಮಾಣ ಪತ್ರ ಪಡೆಯಲು ಅನುಕೂಲ ಮಾಡಿಕೊಡಬೇಕೆಂದು ಕಲ್ಯಾಣ ಕರ್ನಾಟಕ ಗಾಣಿಗ ಜನ ಅಭಿವೃದ್ಧಿ ಸಂಘ ಬಳ್ಳಾರಿ
ಜಿಲ್ಲಾಧ್ಯಕ್ಷ ಬಸವರಾಜ್ ಮನವಿ ಮಾಡಿದರು.
ಅವರು ಇಂದು ನಗರದ ಹೊಸ ಜಿಲ್ಲಾಡಳಿತ ಭವನ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ನಡೆಸಿದ ಜನತಾದರ್ಶನ ಕಾರ್ಯಕ್ರಮದಲ್ಲಿ ಸಚಿವರಿಗೆ ಈ ಕುರಿತು ಮನವಿ ಪತ್ರವನ್ನು ಸಲ್ಲಿಸಿ ಮಾತನಾಡಿದ ಬಸವರಾಜ್, ಗಾಣಿಗ ಸಮಾಜವು ಜಾತಿ ಪ್ರಮಾಣ ಪತ್ರ ಪಡೆಯಲು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಪ್ರಮಾಣ ಪತ್ರವನ್ನು ಪಡೆಯುತ್ತಿದೆ ಆದರೆ ಬಳ್ಳಾರಿ ಜಿಲ್ಲೆಯಲ್ಲಿ ಮಾತ್ರ ಗಾಣಿಗ ಸಮಾಜದ ಜಾತಿ ಪ್ರಮಾಣ ಪತ್ರವನ್ನು ಪಡೆಯಲು ಕಂದಾಯ ಇಲಾಖೆಗೆ ಅರ್ಜಿ ಹಾಕಿದಲ್ಲಿ ಅದನ್ನು ಸಂಬಂಧಿಸಿದ ಅಧಿಕಾರಿಗಳು ಜಾತಿ ಪ್ರಮಾಣ ಪತ್ರಕ್ಕೆ ಬೇಕಾಗುವ ಎಲ್ಲಾ ದಾಖಲೆಗಳನ್ನು ನೀಡಿದರು ಸಹ ನಮ್ಮ ಅರ್ಜಿಯನ್ನು ತಿರಸ್ಕೃತಗೊಳಿಸುತ್ತಾರೆ ಇದರಿಂದ ನಮಗೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಬಹಳ ತೊಂದರೆಯಾಗುತ್ತದೆ. ಮಧ್ಯವರ್ತಿಗಳ ಮೂಲಕ ಎರಡರಿಂದ ಮೂರು ಸಾವಿರ ರೂಪಾಯಿಗಳನ್ನು ನೀಡಿದಲ್ಲಿ ನಮಗೆ ಜಾತಿ ಪ್ರಮಾಣ ಪತ್ರ ನೀಡುತ್ತಾರೆ. ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಈ ಕುರಿತು ಕ್ರಮ ಕೈಗೊಂಡು ತಾವುಗಳು ಈ ವಿಷಯದ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ, ನಮಗೆ ‘ಗಾಣಿಗ
ತಾತಿ ಪ್ರವರ್ಗ-2ಎ ಗೆ ಸೇರಿದ ಜಾತಿ ಪ್ರಮಾಣ ಪತ್ರವನ್ನು ನೀಡಲು
ಪಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರಿಗೆ ಇಂದು ಮನವಿ ಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ವೈ ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿ ಗಿರೀಶ್, ಕೋಶ ಅಧ್ಯಕ್ಷರಾದ ಮಂಜುನಾಥ್ ಎಂ, ಸದಸ್ಯರಾದ ಎಸ್ ಚಂದ್ರಶೇಖರ್, ಶಿವಾನಿ, ಆರ್ ವಿ ಚಂದ್ರಶೇಖರ್, ಏಕಾಂತ್ ಸೇರಿದಂತೆ ಗಾಣಿಗ ಸಮಾಜದ ಹಲವಾರು ಮುಖಂಡರು ಇದ್ದರು.


