ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ನೇತೃತ್ವದ ಪ್ಯಾನೆಲ್ ಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರೈತರು, ಕಾರ್ಮಿಕ ಮುಖಂಡರು, ಸಹಕಾರಿ ಹಾಗೂ ಕಾರ್ಮಿಕ ಮುಖಂಡರು ನೂರಾರು ಸಂಖ್ಯೆಯಲ್ಲಿ ಮಂಗಳವಾರ ಸಚಿವರ ಮನೆಗೆ ಆಗಮಿಸಿ ಅಭಿನಂದಿಸಿದರು.
ಬೆಳಗ್ಗೆಯಿಂದಲೇ ಆಗಮಿಸುತ್ತಿದ್ದ ಜನರು ಕಾರ್ಖಾನೆಯ ಜವಾಬ್ದಾರಿ ತೆಗೆದುಕೊಂಡಿದ್ದಕ್ಕೆ ಧನ್ಯವಾದ ಸಲ್ಲಿಸಿ, ನಿಮ್ಮ ನೇತೃತ್ವದಲ್ಲಿ ಕಾರ್ಖಾನೆಯ ಗತವೈಭವ ಮರುಕಳಿಸಲಿ ಎಂದು ಆಶಿಸಿದರು.
ಎಲ್ಲರಿಗೂ ಧನ್ಯವಾದ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಲ್ಲರ ಸಹಕಾರದೊಂದಿಗೆ ಕಾರ್ಖಾನೆಯ ಪುನಶ್ಚೇತನ ಮಾಡಲಾಗುವುದು. ರೈತರು, ಕಾರ್ಮಿಕರ ಹಿತ ಕಾಪಾಡಲಾಗುವುದು ಎಂದು ಭರವಸೆ ನೀಡಿದರು.ಇದೇ ವೇಳೆ ಸಚಿವರು ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.


