ಬೆಂಗಳೂರು, ಅಕ್ಟೋಬರ್ 3: ಅನಾರೋಗ್ಯದಿಂದ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಸಂಜೆಯೇ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಅವರಿಗೆ ಪೇಸ್ಮೇಕರ್ ಅನ್ನು ಯಶಸ್ವಿಯಗಿ ಅಳವಡಿಸಲಾಗಿದೆ. ಶೀಘ್ರದಲ್ಲೇ ಚೇತರಿಸಿಕೊಂಡ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ ಖರ್ಗೆ ಆರೋಗ್ಯವಾಗಿದ್ದು, ಮನೆಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಶೀಘ್ರದಲ್ಲೇ ಅವರು ಕರ್ತವ್ಯಕ್ಕೆ ಮರಳಲಿದ್ದಾರೆ. ಖರ್ಗೆ ಅವರ ಆರೋಗ್ಯದ ಕುರಿತು ಕಾಂಗ್ರೆಸ್ ಮಾಹಿತಿ ಹಂಚಿಕೊಂಡಿದೆ. ಖರ್ಗೆ ಜೀ ಚೆನ್ನಾಗಿದ್ದಾರೆ. ನಿಮ್ಮೆಲ್ಲರ ಶುಭ ಹಾರೈಕೆ ಮತ್ತು ಬೆಂಬಲಕ್ಕೆ ಧನ್ಯವಾದಗಳು. ಶೀಘ್ರವೇ ತಮ್ಮ ಚಟುವಟಿಕೆಗಳನ್ನು ಪುನಾರಂಭಿಸುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.