ಮಾದಪ್ಪನ ಬೆಟ್ಟದ ತಪ್ಪಲಲ್ಲಿ ಹುಲಿಯ ಕಳೇಬರ ಮತ್ತೇ ಪತ್ತೆ

Ravi Talawar
ಮಾದಪ್ಪನ ಬೆಟ್ಟದ ತಪ್ಪಲಲ್ಲಿ ಹುಲಿಯ ಕಳೇಬರ ಮತ್ತೇ ಪತ್ತೆ
WhatsApp Group Join Now
Telegram Group Join Now

ಚಾಮರಾಜನಗರ, ಅಕ್ಟೋಬರ್ 3: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು  ಸಾವಿಗೀಡಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆ ನಂತರ ಹುಲಿಗಳ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಂಡಿತ್ತು. ಆದರೆ, ಇದೀಗ ಮಾದಪ್ಪನ ಬೆಟ್ಟದ ತಪ್ಪಲಲ್ಲಿ ಮತ್ತೆ ಬೇಟೆಗಾರರು ಸಕ್ರಿಯರಾಗಿರುವ ಅನುಮಾನ ಸೃಷ್ಟಿಯಾಗಿದೆ. ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ಹತ್ತಿರ ಭೂಮಿಯಲ್ಲಿ ಮಣ್ಣಿನಲ್ಲಿ ಮರೆಮಾಡಿ ಇಡಲಾಗಿದ್ದ ಹುಲಿಯ ಅರ್ಧ ಕಳೇಬರ ಪತ್ತೆಯಾಗಿದೆ. ಹುಲಿಯ ತಲೆ, ಭುಜ, ಮುಂಗಾಲುಗಳು ಮಾತ್ರ ಲಭ್ಯವಾಗಿದೆ. ಉಳಿದ ಭಾಗಗಳು ನಾಪತ್ತೆಯಾಗಿದೆ. ಈ ಘಟನೆ ಮಲೆಮಹದೇಶ್ವರ ವನ್ಯಜೀವಿಧಾಮದ ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ನಡೆದಿದೆ.

ಮಲೆಮಹದೇಶ್ವರ ವನ್ಯಜೀವಿಧಾಮದಲ್ಲಿ ಕಳ್ಳಬೇಟೆ ಘಟನೆ ಬಗ್ಗೆ ಸ್ಥಳೀಯರು ಮತ್ತು ಪರಿಸರ ಸಂರಕ್ಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಪರಿಸರ ಇಲಾಖೆ ಮತ್ತು ವನ್ಯಜೀವಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

WhatsApp Group Join Now
Telegram Group Join Now
Share This Article