ಕೇಂದ್ರದ ಅನುದಾನಕ್ಕಾಗಿ ಅಗತ್ಯಬಿದ್ದರೆ ಕೋರ್ಟ್ ಮೊರೆ : ಸಿಎಂ ಸಿದ್ದರಾಮಯ್ಯ

Ravi Talawar
ಕೇಂದ್ರದ ಅನುದಾನಕ್ಕಾಗಿ ಅಗತ್ಯಬಿದ್ದರೆ ಕೋರ್ಟ್ ಮೊರೆ : ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಮೈಸೂರು, ಅಕ್ಟೋಬರ್ 3: ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ತೆರಿಗೆ ಹಣದ ಹಂಚಿಕೆ ಮತ್ತು ಅನುದಾನ ಬಿಡುಗಡೆಯಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕರ್ನಾಟಕದಿಂದ ಕೇಂದ್ರಕ್ಕೆ ಪ್ರತಿ ವರ್ಷ ನಾಲ್ಕೂವರೆ ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಹರಿದು ಹೋಗುತ್ತದೆ. ಆದರೆ, ರಾಜ್ಯಕ್ಕೆ ವಾಪಸ್ ಬರುವುದು ಕೇವಲ ಶೇ 14 ಮಾತ್ರ. ಪ್ರತಿ ಒಂದು ರೂಪಾಯಿ ತೆರಿಗೆಗೆ, ರಾಜ್ಯಕ್ಕೆ ಕೇವಲ 14 ಪೈಸೆ ಮಾತ್ರ ಮರಳಿ ಸಿಗುತ್ತಿದೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ವಿಚಾರವಾಗಿ ಅಗತ್ಯಬಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article