ಕರೂರ್ ಕಾಲ್ತುಳಿತ ಪ್ರಕರಣ; ಎಸ್​ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Ravi Talawar
ಕರೂರ್ ಕಾಲ್ತುಳಿತ ಪ್ರಕರಣ; ಎಸ್​ಐಟಿ ತನಿಖೆಗೆ ಹೈಕೋರ್ಟ್‌ ಆದೇಶ
WhatsApp Group Join Now
Telegram Group Join Now

ಚೆನ್ನೈ, ಅಕ್ಟೋಬರ್ 3: ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತಕ್ಕೆಸಂಬಂಧಿಸಿದಂತೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಾಯಕರ ವಿರುದ್ಧ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕಾಲ್ತುಳಿತದಿಂದ ಜನರು ಸಾವನ್ನಪ್ಪಿದರೂ ಟಿವಿಕೆ ಮುಖ್ಯಸ್ಥ ವಿಜಯ್ ಆ ಘಟನಾ ಸ್ಥಳದಿಂದ ಪಲಾಯನ ಮಾಡಿದ್ದಾರೆ. ಆ ಘಟನೆಯ ಬಗ್ಗೆ ಟಿವಿಕೆ ಪಕ್ಷವು ಸ್ವಲ್ಪವೂ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಹಾಗೇ, ಈ ಘಟನೆಯ ತನಿಖೆಗಾಗಿ ಹಿರಿಯ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಆಸ್ರಾ ಗರ್ಗ್ ನೇತೃತ್ವದ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಕೋರ್ಟ್ ಆದೇಶಿಸಿದೆ.

ನ್ಯಾಯಮೂರ್ತಿ ಸೆಂಥಿಲ್‌ಕುಮಾರ್ ಆ ರ‍್ಯಾಲಿಯ ಆಯೋಜಕರು ಮತ್ತು ಪೊಲೀಸರನ್ನು ಅವರ ಜವಾಬ್ದಾರಿಯ ಬಗ್ಗೆ ಪ್ರಶ್ನಿಸಿದ್ದಾರೆ. “ಈ ಕಾರ್ಯಕ್ರಮದ ಆಯೋಜಕರಾಗಿ ನಿಮಗೆ ಯಾವುದೇ ಜವಾಬ್ದಾರಿ ಇಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ. ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು ಸಾವನ್ನಪ್ಪಿದಾಗ ವಿಜಯ್ ವಿಮಾನದಲ್ಲಿ ಪಲಾಯನ ಮಾಡಿದ ನಡವಳಿಕೆಯನ್ನು ಕೋರ್ಟ್ ಬಲವಾಗಿ ಖಂಡಿಸಿತು.

ಟಿವಿಕೆ ನಾಯಕರಾದ ಬುಸ್ಸಿ ಆನಂದ್ ಮತ್ತು ಸಿಟಿಆರ್ ನಿರ್ಮಲ್ ಕುಮಾರ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಗಳ ಮೇಲಿನ ಆದೇಶಗಳನ್ನು ಮದ್ರಾಸ್ ಹೈಕೋರ್ಟ್ ನ್ಯಾಯಪೀಠ ಕಾಯ್ದಿರಿಸಿದೆ.

 

WhatsApp Group Join Now
Telegram Group Join Now
Share This Article