ನವದೆಹಲಿ, ಅಕ್ಟೋಬರ್ 4: ತೆರಿಗೆ ಸಮರ ಹಾಗೂ ನಂತರದ ಬೆಳವಣಿಗೆಗಳಿಂದ ಭಾರತ-ಅಮೆರಿಕ ನಡುವಣ ಸಂಬಂಧ ಹದಗೆಡುತ್ತಲೇ ಹೋಗಿದ್ದು ಎಲ್ಲರಿಗೂ ತಿಳಿದಿದೆ. ಇದೀಗ, ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಶ್ಲಾಘಿಸಿದ್ದಾರೆ. ಇಸ್ರೇಲ್-ಗಾಜಾ ನಡುವಣ ಸಂಘರ್ಷ ಕೊನೆಗೊಳಿಸುವ ನಿಟ್ಟಿನಲ್ಲಿ ಟ್ರಂಪ್ ಪ್ರಯತ್ನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಈ ವಿಚಾರದಲ್ಲಿ ಟ್ರಂಪ್ ನಾಯಕತ್ವವನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ. ಅಲ್ಲದೆ, ಗಾಜಾದಲ್ಲಿ ಶಾಂತಿ ಸ್ಥಾಪನೆ ಕಾರ್ಯದಲ್ಲಿ ನಿರ್ಣಾಯಕ ಪ್ರಗತಿ ಸಾಧಿಸಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಗಾಜಾದಲ್ಲಿ ಶಾಂತಿ ಸ್ಥಾಪನೆಗಾಗಿ ಟ್ರಂಪ್ ನಾಯಕತ್ವ; ಮೋದಿ ಶ್ಲಾಘನೆ

‘ಗಾಜಾದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳಲ್ಲಿ ನಿರ್ಣಾಯಕ ಪ್ರಗತಿಯ ಮಧ್ಯೆ, ನಾವು ಅಧ್ಯಕ್ಷ ಟ್ರಂಪ್ ಅವರ ನಾಯಕತ್ವವನ್ನು ಸ್ವಾಗತಿಸುತ್ತೇವೆ. ಒತ್ತೆಯಾಳುಗಳ ಬಿಡುಗಡೆಯ ಸುಳಿವು ಒಂದು ಪ್ರಮುಖ ಹೆಜ್ಜೆಯಾಗಿದೆ. ಶಾಶ್ವತ ಮತ್ತು ನ್ಯಾಯಯುತ ಶಾಂತಿಗಾಗಿನ ಎಲ್ಲಾ ಪ್ರಯತ್ನಗಳನ್ನು ಬಲವಾಗಿ ಬೆಂಬಲಿಸುವುದನ್ನು ಭಾರತ ಮುಂದುವರಿಸುತ್ತದೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.