ಯಲ್ಲಪ್ಪ ಡೇಕೋಳ್ಕರ್ ನಿಧನ: ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

Ravi Talawar
ಯಲ್ಲಪ್ಪ ಡೇಕೋಳ್ಕರ್ ನಿಧನ: ಲಕ್ಷ್ಮೀ ಹೆಬ್ಬಾಳಕರ್ ಸಂತಾಪ
WhatsApp Group Join Now
Telegram Group Join Now
ಬೆಳಗಾವಿ: ಉಚಗಾಂವ ಬ್ಲಾಕ್ ಕಾಂಗ್ರೆಸ್‌  ಅಧ್ಯಕ್ಷರಾಗಿದ್ದ ಯಲ್ಲಪ್ಪ ಡೇಕೋಳ್ಕರ್ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪಕ್ಷದ ಬಲವರ್ಧನೆಗೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿದ ಕೊಡುಗೆ ಸದಾ ಸ್ಮರಣೀಯ. ಕಾರ್ಯಕರ್ತರನ್ನು ಪ್ರೇರೇಪಿಸಿ, ಪಕ್ಷದ ಸಂಘಟನೆಯಲ್ಲಿ ಅವರು ವಹಿಸಿದ ಪಾತ್ರ ಪ್ರಮುಖವಾಗಿತ್ತು.
ದುಃಖದ ಈ ಸಂದರ್ಭದಲ್ಲಿ ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬಸ್ಥರಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article