ಔಷಧ ಕಲಬೆರಕೆ ಗೊತ್ತಾದಲ್ಲಿ ತ್ವರಿತವಾಗಿ ದೇಶದಾದ್ಯಂತ ಮಾಹಿತಿ ರವಾನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Ravi Talawar
ಔಷಧ ಕಲಬೆರಕೆ ಗೊತ್ತಾದಲ್ಲಿ ತ್ವರಿತವಾಗಿ ದೇಶದಾದ್ಯಂತ ಮಾಹಿತಿ ರವಾನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
WhatsApp Group Join Now
Telegram Group Join Now

ಬೆಂಗಳೂರು, ಅಕ್ಟೋಬರ್ 6: ಯಾವುದೇ ಔಷಧ ಕಲಬೆರಕೆ ಎಂದು ಗೊತ್ತಾದಲ್ಲಿ ತ್ವರಿತವಾಗಿ ದೇಶದಾದ್ಯಂತ ಮಾಹಿತಿ ರವಾನೆಯಾಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ಪುದುಚೇರಿ ಸೇರಿ ಹಲವು ರಾಜ್ಯಗಳಲ್ಲಿ ಕಫ್ ಸಿರಪ್​ ದುರಂತ ಸಂಭವಿಸಿದ ವಿಚಾರವಾಗಿ ಹಾಸನದ ಚನ್ನರಾಯಪಟ್ಟಣದಲ್ಲಿ ಪ್ರತಿಕ್ರಿಯಿಸಿದ ಅವರು, ಔಷಧ ಕಲಬೆರಕೆಯಂಥ ಪ್ರಕರಣಗಳ ಮಾಹಿತಿ ವಿನಿಮಯಕ್ಕೆ ಪ್ರತ್ಯೇಕ ವೆಬ್‌ಸೈಟ್‌ ರಚಿಸುವಂತೆ ಈ ಹಿಂದೆಯೇ ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದಿದ್ದೆ. ಔಷಧಿಗಳ ಕಲಬೆರಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತರುವ ಅವಶ್ಯಕತೆ ಇದೆ. ಅಲ್ಲದೇ ರಾಜ್ಯ ರಾಜ್ಯಗಳ ನಡುವೆ ಮಾಹಿತಿ ಸಿಗುವಂತಹ ವ್ಯವಸ್ಥೆ ಜಾರಿಗೆ ತರುವತ್ತ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಹೇಳಿದ್ದಾರೆ.

ಮುನ್ನೆಚ್ವರಿಕೆ ಕ್ರಮವಾಗಿ ಎಲ್ಲಾ ಕಂಪನಿಗಳ ಕಫ್‌ ಸಿರಪ್​​ಗಳ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರಾಜ್ಯದಲ್ಲಿ ಕಫ್‌ ಸಿರಫ್‌ಗಳ ಟೆಸ್ಟ್‌ಗೆ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಈ ಮೊದಲಿನಿಂದಲೂ ಔಷಧಿ ನಿಯಂತ್ರಣ ಇಲಾಖೆ ಎಚ್ಚರಿಕೆ ವಹಿಸಿದೆ. ಹೆಚ್ಚಿನ ಔಷಧಿಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದು, ಇದರಲ್ಲಿ ಕರ್ನಾಟಕವು ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ಸಚಿವರು ತಿಳಿಸಿದರು.

WhatsApp Group Join Now
Telegram Group Join Now
Share This Article