ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಾಹುಲ್ ಜಾರಕಿಹೊಳಿ ಸ್ಪರ್ಧಿಸುವ ಬಗ್ಗೆ ಇನ್ನೂ ಚರ್ಚೆಯಲ್ಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಾಹುಲ್ ಜಾರಕಿಹೊಳಿ ಸ್ಪರ್ಧೆ ಮಾಡುವ ಕುರಿತು ಎಲ್ಲ ನಾಯಕರೊಂದಿಗೆ ಚರ್ಚಿಸಿ 10 ದಿನದಲ್ಲಿ ತಿರ್ಮಾಣ ಕೈಗೊಳ್ಳಲಾಗುವುದು ಎಂದರು.
ಸಿಎಂಗೆ ಶೀಗ್ರವೇ ಮನವಿ: ಸಚಿವ ಸಂಪುಟದಲ್ಲಿ ಖಾಲಿಯಿರುವ 2 ಹುದ್ಧೆಗಳನ್ನು ವಾಲ್ಮೀಕಿ ಸಮಾಜಕ್ಕೆ ನೀಡಬೇಕೆಂದು ಸಿಎಂ ಸಿದ್ಧರಾಮಯ್ಯ ಅವರಿಗೆ ಮನವಿ ಮಾಡಲಾಗುವುದು ಎಂದ ಅವರು, ರಾಜಣ್ಣ ಅವರು ಮೊದಲು ಪಾದರಸದಂತೆ ಇದ್ದ ಸಿಎಂ ಸಿದ್ಧರಾಮಯ್ಯ ಇಲ್ಲ ಎಂಬ ಹೇಳಿಕೆಗೆ ಇದನ್ನ ಅವರ ಬಳಿಯೇ ಕೇಳಬೇಕು ಎಂದರು.
ಇನ್ನು ಸಿಎಂ ಸ್ವತಃ 2ವರೆ ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆಂದು ಹೇಳಿದ್ದು, ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಅಂತಿಮವಾಗಿ ಹೈಕಮಾಂಡ್ ಹೇಳಬೇಕು ಎಂದ ಅವರು, ಬೆಂಗಳೂರಿನಲ್ಲಿ ನಾಳೆ ವಾಲ್ಮೀಕಿ ಜಯಂತಿಯಿದ್ದು ಆ ವೇಳೆ ಸಂಪುಟದಲ್ಲಿ ಖಾಲಿಯಿರುವ ಎರಡು ಸ್ಥಾನಗಳನ್ನು ವಾಲ್ಮೀಕಿ ಸಮಾಜಕ್ಕೆ ನೀಡಬೇಕೆಂದು ಒತ್ತಾಯಿಸಲಾಗುವುದು ಎಂದರು.