ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಮತ್ತು ಇಲಾಖೆಗಳ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

Pratibha Boi
ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಮತ್ತು ಇಲಾಖೆಗಳ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಪ್ರತಿಭಟನೆ
WhatsApp Group Join Now
Telegram Group Join Now

ರಾಮದುರ್ಗ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಮತ್ತು ಇಲಾಖೆಗಳ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿ (ರಿ) (ಚಂದ್ರಕಾಂತ ಕಾದ್ರೋಳ್ಳಿ ಬಣ) ಸಂಘಟನೆಯಿಂದ ಸೋಮವಾರ (ಅ.6) ಬೃಹತ್ ಪ್ರತಿಭಟನೆ ಮುಖಾಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.ತಾಲೂಕು ಪಂಚಾಯತದಿಂದ ತಹಶೀಲ್ದಾರ್ ಕಚೇರಿ ವರೆಗೆ ರ್ಯಾಲಿ  ಬೃಹತ್ ಪ್ರತಿಭಟನೆ ಮೂಲಕ ತಹಶೀಲ್ದಾರ್ ಅವರಿಗೆ ಮನವಿ ನೀಡಿ  ತಾಲ್ಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ  ಸಮುದಾಯದ ಜನರು ಕಳೆದ ಹಲವಾರು ವರ್ಷಗಳಿಂದ ರಸ್ತೆ, ಚರಂಡಿ, ಶೌಚಾಲಯ, ಸ್ಮಶಾನ ಸೇರಿದಂತೆ ಹಲವು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇದರ ಬಗ್ಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಎಲ್ಲಾ  ಬೇಡಿಕೆಗಳನ್ನು ಒಂದು ತಿಂಗಳೊಳಗೆ ಕೂಲಂಕುಷವಾಗಿ ತನಿಖೆ ಮಾಡಿ ಸೂಕ್ತ ಕ್ರಮ ಜರುಗಿಸದಿದ್ದರೆ, ನ್ಯಾಯಕ್ಕಾಗಿ ಜಿಲ್ಲಾಧಿಕಾರಿ ಕಛೇರಿಯ ಎದುರಿಗೆ ನಮ್ಮ ಸಂಘಟನೆಯ ವತಿಯಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಶೇಖರ ಮಾದರ,  ಶ್ರೀಕಾಂತ ಮಾದರ, ಹನಮವ್ವ ಮರೆನ್ನವರ, ನೀಲವ್ವ ಮಾದರ, ನೀಲವ್ವ ದುಳಾಯ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

WhatsApp Group Join Now
Telegram Group Join Now
Share This Article