ಬೆಂಗಳೂರಿನಲ್ಲಿ ಜರ್ಮನ್ ಭಾಷೆಯಲ್ಲಿ ವಿದೇಶಿ ಭಾಷಾ ಪರೀಕ್ಷಾ ಕೇಂದ್ರ: ಸರ್ಕಾರ ನಿರ್ಧಾರ

Ravi Talawar
ಬೆಂಗಳೂರಿನಲ್ಲಿ ಜರ್ಮನ್ ಭಾಷೆಯಲ್ಲಿ ವಿದೇಶಿ ಭಾಷಾ ಪರೀಕ್ಷಾ ಕೇಂದ್ರ: ಸರ್ಕಾರ ನಿರ್ಧಾರ
WhatsApp Group Join Now
Telegram Group Join Now

ಬೆಂಗಳೂರು, ಅ.8: ಕೌಶಲ್ಯ ಅಭಿವೃದ್ಧಿ ಇಲಾಖೆ ಕರ್ನಾಟಕದ ಯುವಕರು ವಿದೇಶಗಳಲ್ಲಿ ಉದ್ಯೋಗ ಪಡೆಯಲು ಸಹಾಯ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜರ್ಮನ್ ಭಾಷೆಯಲ್ಲಿ ವಿದೇಶಿ ಭಾಷಾ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಿದೆ. ಈ ಮೂಲಕ ಜರ್ಮನ್ ಭಾಷೆಯಲ್ಲಿ ಕೋರ್ಸ್‌ಗಳನ್ನು ನೀಡುವುದು ಹಾಗೂ ಪರೀಕ್ಷೆಗಳನ್ನು ನಡೆಸುವ ಏಕೈಕ ಕೇಂದ್ರವಾಗಿದೆ. ಬೆಂಗಳೂರಿನ ಗೋಥೆ ಇನ್‌ಸ್ಟಿಟ್ಯೂಟ್‌ನಲ್ಲಿ ಜರ್ಮನ್ ಭಾಷೆಯಲ್ಲಿ ಪರೀಕ್ಷೆ ನಡೆಸುವುದು ಹಾಗೂ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಲಾಗುವುದು ಎಂದು ಕೌಶಲ್ಯ ಅಭಿವೃದ್ಧಿ ಇಲಾಖೆ ತಿಳಿಸಿದೆ. ರಾಜ್ಯದ ಆರೋಗ್ಯ ಸಿಬ್ಬಂದಿಗಳಿಗೂ ಕೂಡ ಜರ್ಮನ್ ಭಾಷೆಯಲ್ಲೇ ತರಬೇತಿ ನೀಡಲು ಮುಂದಾಗಿದೆ. ಯಾಕೆಂದರೆ ಜರ್ಮನ್​​​ನಲ್ಲಿ ನರ್ಸ್​ಗಳ ಅವಶ್ಯಕತೆ ಹೆಚ್ಚಿದೆ. ಈ ಕಾರಣಕ್ಕಾಗಿ ಕೋರ್ಸ್​​ನಲ್ಲಿ ಇವರಿಗೂ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ.

 

WhatsApp Group Join Now
Telegram Group Join Now
Share This Article