ಕೊಪ್ಪಳ (ಅ.08): ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ವೆಂಕಟೇಶ್ ಎಂಬುವವರ ಬರ್ಬರ ಕೊಲೆಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ವೆಂಕಟೇಶ್ ಎಂಬುವವರ ಬರ್ಬರ ಕೊಲೆಗೈದಿದ್ದಾರೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ತಕ್ಷಣ ಎಚ್ಚೆತ್ತ ಪೊಲೀಸರು ತನಿಖೆ ಶುರು ಮಾಡಿದ್ದು, ನಾಲ್ವರನ್ನ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಇತ್ತ ಪೊಲೀಸ್ ಠಾಣೆ ಮುಂದೆ ನೂರಾರು ಜನ ಜಮಾಯಿಸಿದ್ದು, ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.
ಕೊಲೆ ಮಾಡಿ ಪರಾರಿಯಾಗಿದ್ದ ಐದು ಜನರ ಪೈಕಿ ನಾಲ್ಕು ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ಆರೋಪಿಗಳಾದ ಧನಂಜಯ, ಮೈಲಾರಿ ಅಲಿಯಾಸ್ ವಿಜಯ್, ಸಲೀಂ, ಭೀಮ ಎಂಬುವವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗ್ತಿದೆ.
ಸಂಸದ ರಾಜಶೇಖರ ಹಿಟ್ನಾಳ ಭೇಟಿ: ಬಿಜೆಪಿ ಮುಖಂಡನ ಹತ್ಯೆ ಬೆನ್ನಲ್ಲೇ ಗಂಗಾವತಿ ನಗರ ಪೊಲೀಸ್ ಠಾಣೆಗೆ ಸಂಸದ ರಾಜಶೇಖರ ಹಿಟ್ನಾಳ ಭೇಟಿ ನೀಡಿದ್ದಾರೆ. ಕೊಲೆ ಸಂಬಂದ ಎಸ್ ಪಿ ಜೊತೆ ಸಂಸದ ರಾಜಶೇಖರ ಹಿಟ್ನಾಳ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದಾರೆ ಎನ್ನಲಾಗ್ತಿದೆ.