ಬೆಳಗಾವಿ: ರಾಜ್ಯ ಮಟ್ಟದ ಗಮನ ಸೆಳೆದಿರುವ ಬೆಳಗಾವಿ ಡಿ ಸಿ ಸಿ ಬ್ಯಾಂಕ ಚುನಾವಣೆಯು ಇದೆ ತಿಂಗಳು 19 ರಂದು ನಡೆಯುವ ಪ್ರಯುಕ್ತ ಚನ್ನಮ್ಮನ ಕಿತ್ತೂರು ತಾಲೂಕಾ ವತಿಯಿಂದ ಡಿಸಿಸಿ ಬ್ಯಾಂಕ ನಿರ್ದೇಶಕ ಸ್ಥಾನಕ್ಕೆ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಅವರ ಸಹೋದರ ನಾನಾಸಾಹೇಬ ಪಾಟೀಲ ಅವರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮುಖ್ಯ ಶಾಖೆಯಲ್ಲಿ ಚುನಾವಣೆ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಿತ್ತೂರು ಹಾಗೂ ಬೈಲಹೊಂಗಲ ತಾಲೂಕಿನ ಸಹಕಾರಿ ಮುಖಂಡರು ಉಪಸ್ಥಿತರಿದ್ದರು.