ದೇಶದ ಅಭಿವೃದ್ಧಿಗೆ ಹಿರಿಯ ನಾಗರಿಕರ ಮಾರ್ಗದರ್ಶನ ಅವಶ್ಯಕ: ನ್ಯಾ.ರಾಜೇಶ್ ಎನ್.ಹೊಸಮನೆ

Ravi Talawar
ದೇಶದ ಅಭಿವೃದ್ಧಿಗೆ ಹಿರಿಯ ನಾಗರಿಕರ ಮಾರ್ಗದರ್ಶನ ಅವಶ್ಯಕ: ನ್ಯಾ.ರಾಜೇಶ್ ಎನ್.ಹೊಸಮನೆ
WhatsApp Group Join Now
Telegram Group Join Now

ಬಳ್ಳಾರಿ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಪ್ರಾಯ

ಬಳ್ಳಾರಿ,ಅ.10: ಹಿರಿಯ ನಾಗರಿಕರು ಸಮಾಜದ ಬೇರುಗಳು. ಒಂದು ದೇಶ, ರಾಜ್ಯ ಅಭಿವೃದ್ಧಿಯಾಗಲು ಹಿರಿಯ ನಾಗರಿಕರ ಮಾರ್ಗದರ್ಶನ ಅವಶ್ಯಕವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ “ಹಿರಿಯ ನಾಗರಿಕರು: ನಮ್ಮ ಆಶೋತ್ತರಗಳು ನಮ್ಮ ಯೋಗಕ್ಷೇಮ ಮತ್ತು ನಮ್ಮ ಹಕ್ಕುಗಳನ್ನು ಸ್ಥಳೀಯ ಮತ್ತು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬಲ್ಲ ಸಶಕ್ತರು” ಎಂಬ ವಿಶ್ವಸಂಸ್ಥೆಯ ಘೋಷವಾಕ್ಯದಡಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಗುರುವಾರ ಏರ್ಪಡಿಸಿದ್ದ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಹಿರಿಯ ನಾಗರಿಕರನ್ನು ಕಡೆಗಣಿಸುತ್ತಿರುವುದು ಕಂಡುಬರುತ್ತಿದ್ದು, ವಿಷಾಧನೀಯ ಸಂಗತಿಯಾಗಿದೆ. ಹಿರಿಯ ನಾಗರಿಕರನ್ನು ಗೌರವದಿಂದ ಕಾಣಬೇಕು. ಅವರನ್ನು ಕಡೆಗಣಿಸದೇ ಕಾಳಜಿ ವಹಿಸಿ ಒಂಟಿತನ ಕಾಡದೇ ಹಾಗೆ ನೋಡಿಕೊಳ್ಳಬೇಕು ಎಂದರು.
ಸಮಾಜದಲ್ಲಿ ಹಿರಿಯ ನಾಗರಿಕರಿಗೆ ಬೇಕಾದ ಗೌರವ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು. ಹಿರಿಯ ನಾಗರಿಕರು ನಿಮ್ಮಲ್ಲಿರುವ ಯಾವುದೇ ಕಾನೂನಾತ್ಮಕ ಸಮಸ್ಯೆಗಳಿದ್ದರೆ ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ದೂರು ಸಲ್ಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಹಿರಿಯ ನಾಗರಿಕರ ಅನುಭವದಿಂದ ದೇಶವು ಅಭಿವೃದ್ಧಿಯಲ್ಲಿ ಸಾಗುತ್ತಿದೆ. ನಮ್ಮ ದೇಶದ ಪ್ರಧಾನಿ ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಸಹ ಹಿರಿಯ ನಾಗರಿಕರಾಗಿದ್ದು, ದೇಶವನ್ನು ಅಭಿವೃದ್ಧಿಯ ಕಡೆ ಮುನ್ನೆಡೆಸುವಲ್ಲಿ ಅವರ ಮಾರ್ಗದರ್ಶನವು ಅತ್ಯಂತ ಮಹತ್ತರವಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರವು ಹಿರಿಯ ನಾಗರಿಕರ ಆರ್ಥಿಕ ಸಬಲತೆಯ ದೃಷ್ಠಿಯಿಂದ 60-65 ವರ್ಷ ಮೇಲ್ಪಟ್ಟವರಿಗೆ ವೃದ್ಧಾಪ್ಯ ವೇತನ ಹಾಗೂ ಇತರೆ ಯೋಜನೆಗಳನ್ನು ಜಾರಿಗೊಳಿಸಿದ್ದು, ಹಿರಿಯ ನಾಗರಿಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್ ಅವರು ಮಾತನಾಡಿ, ಮಕ್ಕಳು ತಮ್ಮ ಪೋಷಕರನ್ನು ಆರೈಕೆ ಮಾಡದೇ ಇರುವುದು, ವೃದ್ಧಾಶ್ರಮಕ್ಕೆ ಸೇರಿಸುವುದು, ಆಸ್ತಿ ಕಲಹ ಇನ್ನಿತರೆ ಸಮಸ್ಯೆಗಳು ಇದ್ದಲ್ಲಿ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ನ್ಯಾಯಮಂಡಳಿ ಇದ್ದು, ಹಿರಿಯ ನಾಗರಿಕರ ಕಾಯ್ದೆ-2007 ರಡಿ ದೂರು ಸಲ್ಲಿಸಿ ವಿಚಾರಣೆ ನಡೆಸಬಹುದಾಗಿದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್ ಅವರು ಮಾತನಾಡಿ, ಒಂದು ದೇಶವು ಸುಭೀಕ್ಷೆಯಿಂದ ಇರಲು ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು ತುಂಬಾ ಅವಶ್ಯಕ. ಹಿರಿಯ ನಾಗರಿಕರು ನೈತಿಕ ಮೌಲ್ಯಗಳನ್ನು ಮತ್ತು ಜೀವನದ ರೂಪುರೇಷೆಗಳನ್ನು ಇಂದಿನ ಪೀಳಿಗೆಯಲ್ಲಿ ಆಳವಾಗಿ ಬಿತ್ತುವ ಕೆಲಸವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಶತಾಯುಶಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಿರಿಯ ನಾಗರಿಕರಿಗೆ ಸನ್ಮಾನಿಸಲಾಯಿತು. ಬಳಿಕ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಬಹುಮಾನ ವಿತರಿಸಲಾಯಿತು. ವಿವಿಧ ರೀತಿಯ ಸಲಕರಣೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಗೋವಿಂದಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಸವಿತಾ, ನಿವೃತ್ತ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಟಿ.ಮಲ್ಲೇಶ್, ಹಿರಿಯ ಸಾಹಿತಿ ಡಿ.ವೆಂಕಮ್ಮ, ಸ್ಮೆöÊಲ್ ಸಂಸ್ಥೆಯ ಸಿಬ್ಬಂದಿ ಸೇರಿದಂತೆ ಹಿರಿಯ ನಾಗರಿಕರು ಹಾಗೂ ಇತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article