ಡಿಸಿಸಿ ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಸಿದ ಚನ್ನರಾಜ ಹಟ್ಟಿಹೊಳಿ

Ravi Talawar
ಡಿಸಿಸಿ ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಸಿದ ಚನ್ನರಾಜ ಹಟ್ಟಿಹೊಳಿ
WhatsApp Group Join Now
Telegram Group Join Now
ಬೆಳಗಾವಿ: ಪ್ರತಿಷ್ಠಿತ ಬೆಳಗಾವಿ ‌ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆ ‌ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಇತರೆ ಕ್ಷೇತ್ರದಿಂದ ಕಣಕ್ಕಿಳಿಯಲು ನಾಮಪತ್ರ ಸಲ್ಲಿಸಿದರು.‌
ಶನಿವಾರ ಡಿಸಿಸಿ ಬ್ಯಾಂಕ್ ನ ಕೇಂದ್ರ ಕಚೇರಿಗೆ ಆಗಮಿಸಿದ ಅವರು, ಇತರೇ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ‌ ಸಲ್ಲಿಸಿದರು.‌
ಚನ್ನರಾಜ ಹಟ್ಟಿಹೊಳಿ ಜೊತೆ ಬೆಳಗಾವಿ ತಾಲೂಕು ನಿರ್ದೇಶಕ ಸ್ಥಾನಕ್ಕೆ ರಾಹುಲ್ ಜಾರಕಿಹೊಳಿ. ಗೋಕಾಕ್ ತಾಲೂಕು ನಿರ್ದೇಶಕ ಸ್ಥಾನಕ್ಕೆ ಅಮರನಾಥ ಜಾರಕಿಹೊಳಿ. ಮೂಡಲಗಿ ತಾಲೂಕು ನಿರ್ದೇಶಕ ಸ್ಥಾನಕ್ಕೆ ನೀಲಕಂಠ ಕಪ್ಪಲಗುದ್ದಿ ನಾಮ ಪತ್ರ ಸಲ್ಲಿಸಿದರು.
ಈ ವೇಳೆ ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ವಿಶ್ವಾಸ ವೈದ್ಯ, ಅಣ್ಣಾಸಾಹೇಬ್ ಜೊಲ್ಲೆ, ಅರವಿಂದ ಪಾಟೀಲ್, ಮಹಾಂತೇಶ ದೊಡ್ಡಗೌಡರ, ವಿರುಪಾಕ್ಷ ಮಾಮನಿ, ವಿಕ್ರಮ ಇನಾಮ್ದಾರ ಸೇರಿದಂತೆ ಅನೇಕರು ಇದ್ದರು.
WhatsApp Group Join Now
Telegram Group Join Now
Share This Article