ಒಂದು ನಿಲ್ದಾಣ-ಒಂದು ಉತ್ಪನ್ನ ಯೋಜನೆಯಿಂದ ಎನ್ಆರ್ಎಲ್ಎಂ ಸ್ವಸಹಾಯ ಸಂಘಗಳಿಗೆ ಅನುಕೂಲ: ಈ.ತುಕಾರಾಮ್

Ravi Talawar
ಒಂದು ನಿಲ್ದಾಣ-ಒಂದು ಉತ್ಪನ್ನ ಯೋಜನೆಯಿಂದ ಎನ್ಆರ್ಎಲ್ಎಂ ಸ್ವಸಹಾಯ ಸಂಘಗಳಿಗೆ ಅನುಕೂಲ: ಈ.ತುಕಾರಾಮ್
WhatsApp Group Join Now
Telegram Group Join Now
ಬಳ್ಳಾರಿ,ಅ.13.ಕೇಂದ್ರ ಸರ್ಕಾರದ ಒಂದು ನಿಲ್ದಾಣ-ಒಂದು ಉತ್ಪನ್ನ ಯೋಜನೆಯಿಂದ ಎನ್ಆರ್ಎಲ್ಎಂ ಸ್ವಸಹಾಯ ಸಂಘಗಳಿಗೆ ಅನುಕೂಲವಾಗಲಿದೆ. ಆರ್ಥಿಕ ಪ್ರಗತಿಗೂ ಇದು ಸಹಕಾರಿಯಾಗಲಿದೆ ಎಂದು ಬಳ್ಳಾರಿ ಲೋಕಸಭಾ ಸಂಸದ ಈ.ತುಕಾರಾಮ್ ಅವರು ಹೇಳಿದರು.
ಸೋಮವಾರ ನಗರದ ಮುಖ್ಯ ರೈಲು ನಿಲ್ದಾಣದಲ್ಲಿ ಒಂದು ನಿಲ್ದಾಣ-ಒಂದು ಉತ್ಪನ್ನ ಯೋಜನೆಯಡಿ ಎನ್ಆರ್ಎಲ್ಎಂ ಸ್ವಸಹಾಯ ಸಂಘದ ಉತ್ಪನ್ನ ಮಾರಾಟ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ಈ ಯೋಜನೆಯಿಂದ ಸ್ಥಳೀಯ ಉತ್ಪನ್ನಗಳನ್ನು ಜನಪ್ರಿಯಗೊಳಿಸಲು ಅನುಕೂಲವಾಗಲಿದೆ ಎಂದರು.
ಜಿಪಂ ನ  ಎನ್ಆರ್ಎಲ್ಎಂ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದ ಸ್ವ ಸಹಾಯ ಸಂಘಗಳಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.
ಪಾಶ್ಚಾತ್ಯ ಉತ್ಪನ್ನ ತೊರೆದು, ದೇಶಿ ಉತ್ಪನ್ನಗಳನ್ನು ಬಳಸುವ ಮೂಲಕ ಸಾರ್ವಜನಿಕರು ತಮ್ಮ ಆರೋಗ್ಯ ಕಾಳಜಿ ವಹಿಸಬೇಕು ಎಂದು ಕರೆ ನೀಡಿದ ಸಂಸದರು, ಸ್ಥಳೀಯ ಉತ್ಪನ್ನಗಳ ಆಹಾರ ಪದಾರ್ಥಗಳಿಗೆ ಮಾರುಕಟ್ಟೆ ವಿಸ್ತರಣೆಯಾಗಲಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ವಿಜಯನಗರ ಜಿಲ್ಲೆ ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಎಲ್ಲಾ ರೈಲು ನಿಲ್ದಾಣಗಳಲ್ಲಿ ಮತ್ತು ನಗರ ಕೇಂದ್ರ ಬಸ್ ಸ್ಟ್ಯಾಂಡ್ ಗಳಲ್ಲಿ ಉತ್ಪನ್ನ ಮಾರಾಟ ಮಳಿಗೆಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.
*ಸಾರ್ವಜನಿಕರ ಅಹವಾಲು ಸ್ವೀಕಾರ:* ಸಂವಿಧಾನದ ಧ್ಯೇಯೋದ್ದೇಶ ಈಡೇರಬೇಕೆಂದರೆ ಜನಪ್ರತಿನಿಧಿಗಳು, ಅಧಿಕಾರಿಗಳು ಸಾರ್ವಜನಿಕರ ಕುಂದು-ಕೊರತೆ ಆಲಿಸಿ, ಪರಿಹರಿಸುವ ಸಂಯಮ ಇರಬೇಕು ಎಂದು ಸಂಸದ ಈ.ತುಕಾರಾಮ್ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಆಯೋಜಿಸಿದ್ದ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಾನೂನಿನಾತ್ಮಕವಾಗಿ ಬಗೆಹರಿಸಬಹುದಾದವುಗಳನ್ನು ಕಾಲಮಿತಿಯಲ್ಲಿ ಬಗೆಹರಿಸಬೇಕು. ಉಳಿದವುಗಳನ್ನು ಸಂಸದರ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಬಳಿಕ ಸಂಸದರು, ಕೇಂದ್ರ ಮತ್ತು ಕೇಂದ್ರ ಪುರಸ್ಕೃತ ಹಾಗೂ ಇತರೆ ಯೋಜನೆಗಳ ಕುರಿತಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಡಾ.ಬಾಬು ಜಗನ್ ಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಪಂ ಮಾಜಿ ಸದಸ್ಯರು, ರೈಲ್ವೆ ಅಧಿಕಾರಿಗಳು, ಸ್ವಸಹಾಯ ಸಂಘದ ಮಹಿಳಾ ಸದಸ್ಯರು, ಸಾರ್ವಜನಿಕರು ಹಾಗೂ ಇತರರು ಇದ್ದರು.
WhatsApp Group Join Now
Telegram Group Join Now
Share This Article