ಅಧಿಕಾರ ಇದ್ದಾಗ ಒಳ್ಳೆಯ ಕೆಲಸ ಮಾಡಬೇಕೆಂದು ಸಂಕಲ್ಪ ಮಾಡಿದ್ದೇನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Ravi Talawar
ಅಧಿಕಾರ ಇದ್ದಾಗ ಒಳ್ಳೆಯ ಕೆಲಸ ಮಾಡಬೇಕೆಂದು ಸಂಕಲ್ಪ ಮಾಡಿದ್ದೇನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌
WhatsApp Group Join Now
Telegram Group Join Now
ಕರಡಿಗುದ್ದಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅನುದಾನದಲ್ಲಿ ಭವ್ಯವಾದ ದೇವಸ್ಥಾನ ನಿರ್ಮಾಣ : ಉದ್ಘಾಟಿಸಿ ಕಣ್ತುಂಬಿಕೊಂಡ ಸಚಿವೆ
72 ಲಕ್ಷ ರೂಪಾಯಿ ವೆಚ್ಚದಲ್ಲಿ ಬಸವೇಶ್ವರ ದೇವಸ್ಥಾನ ನಿರ್ಮಾಣ
 *ಬೆಳಗಾವಿ:*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಒದಗಿಸಿರುವ 72 ಲಕ್ಷ ರೂ ಅನುದಾನ ಬಳಸಿ ಕರಡಿಗುದ್ದಿ ಗ್ರಾಮದಲ್ಲಿ ಬಸವೇಶ್ವರ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಭಾನುವಾರ ನೂತನ ಕಟ್ಟಡ ಲೋಕಾರ್ಪಣೆ ಹಾಗೂ ಕಳಸಾರೋಹಣ ಕಾರ್ಯಕ್ರಮ ನಡೆಯಿತು.
 ಈ ವೇಳೆ ಮಾತನಾಡಿದ ಸಚಿವರು, ಅಧಿಕಾರ ಶಾಶ್ವತವಲ್ಲ, ಆದರೆ ಅಧಿಕಾರ ಇದ್ದಾಗ ಒಳ್ಳೆಯ ಕೆಲಸ ಮಾಡಬೇಕೆಂದು ಸಂಕಲ್ಪ ಮಾಡಿದ್ದೇನೆ. ಊರಿನ ಮಗಳಾಗಿ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ಹೇಳಿದರು.
ಗ್ರಾಮದಲ್ಲಿ ವಿಜೃಂಭಣೆಯಿಂದ ದೇವಸ್ಥಾನವನ್ನು ಉದ್ಘಾಟಿಸಲಾಗಿದೆ. ಊರಿನ ಸಂಭ್ರಮ, ಸಡಗರವನ್ನು ನೋಡಲು ಎರಡು ಕಣ್ಣು ಸಾಲದು. 72 ಲಕ್ಷ ರೂಪಾಯಿ ವೆಚ್ಚದಲ್ಲಿ ಬಸವೇಶ್ವರ ದೇವಸ್ಥಾನ ನಿರ್ಮಾಣ ಮಾಡಲಾಗಿದ್ದು, ಅಲಂಕಾರಿಕ ಶಿಲ್ಪಕಲೆಯೊಂದಿಗೆ ವಿನ್ಯಾಸಗೊಳಿಸಲಾದ ಈ ದೇವಸ್ಥಾನವು ಧಾರ್ಮಿಕ ನಂಬಿಕೆಗೆ ಮಾತ್ರವಲ್ಲ, ಸಾಂಸ್ಕೃತಿಕ ಸೌಂದರ್ಯಕ್ಕೂ ಮಾದರಿಯಾಗಿದೆ. ಭಕ್ತರ ಶ್ರದ್ಧೆ ಹಾಗೂ ದೇವರ ಆಶೀರ್ವಾದದಿಂದ ಈ ಪವಿತ್ರ ತಾಣ ಮುಂದಿನ ಪೀಳಿಗೆಗಳಿಗೆ ಪ್ರೇರಣೆಯಾಗಲಿ ಎಂದು ಆಶಿಸುತ್ತೇನೆ ಎಂದರು.
ಕರಡಿಗುದ್ದಿ ಗ್ರಾಮದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, 1.25 ಕೋಟಿ ರೂಪಾಯಿ ವೆಚ್ಚದಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಮಾಡಲಾಗುತ್ತಿದೆ. ಪಶು ಆಸ್ಪತ್ರೆ ಮಾಡಲಾಗಿದೆ, 4 ಕೋಟಿ ವೆಚ್ಚದಲ್ಲಿ ಗ್ರಾಮದ ರಸ್ತೆಗಳ ಅಭಿವೃದ್ಧಿ ಮಾಡಲಾಗುವುದು. ಪ್ರತಿ ಗ್ರಾಮದಲ್ಲಿ 2-3 ದೇವಸ್ಥಾನ ನಿರ್ಮಾಣ ಮಾಡಲಾಗಿದೆ, ಅರಳಿಕಟ್ಟಿಯಲ್ಲಿ ಮಠ ಸೇರಿದಂತೆ 3 ದೇವಸ್ಥಾನ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.
ಅಧಿಕಾರ ಶಾಶ್ವತವಲ್ಲ, ಆದರೆ ಅಧಿಕಾರ ಇದ್ದಾಗ ಒಳ್ಳೆಯ ಕೆಲಸ ಮಾಡಬೇಕೆಂದು ಸಂಕಲ್ಪ ಮಾಡಿದ್ದೇನೆ. ನಿಮ್ಮೆಲ್ಲರ ಸಹಕಾರದಿಂದ ಶಾಸಕಿಯಾಗಿ, ಸಚಿವೆಯಾಗಿ ಕೆಲಸ ಮಾಡುತ್ತಿದ್ದೇನೆ. ಎಲ್ಲರೂ ಒಂದೇ ತಾಯಿಯ ಮಕ್ಕಳಂತೆ ಕೆಲಸ ಮಾಡೋಣ ಎಂದರು.
ಸಚಿವರನ್ನೂ ಊರೊಳಗೆ ಭವ್ಯವಾದ ಮೆರವಣಿಗೆಯೊಂದಿಗೆ ಕರೆದೊಯ್ಯಲಾಯಿತು.
ಪ್ರತಿ ಮನೆ ಮುಂದೆ ರಂಗವಲ್ಲಿ ಹಾಕಿ, ಆರತಿ ಬೆಳಗಿ ಸ್ವಾಗತಿಸಲಾಯಿತು.
ಕಾರ್ಯಕ್ರಮದಲ್ಲಿ ಅರಳಿಕಟ್ಟಿ ತೋಂಟದಾರ್ಯ ಮಠದ ಶ್ರೀ ಶಿವಮೂರ್ತಿ ಮಹಾಸ್ವಾಮಿಗಳು ಆಶಿರ್ವಚನ ನೀಡಿ, ಲಕ್ಷ್ಮೀ ಹೆಬ್ಬಾಳಕರ್ ಅವರಂತಹ ಜನಪ್ರತಿನಿಧಿ ಸಿಗುವುದು ಕಷ್ಟ. ಅವರು ಈಗ ಇಡೀ ರಾಜ್ಯದ ಮನೆ ಮಗಳಾಗಿದ್ದಾರೆ. 2028ರಲ್ಲಿ ಕರ್ನಾಟಕದ ಮೊದಲ ಮಹಿಳಾ ಮುಖ್ಯಮಂತ್ರಿ ಆಗಲಿ ಎಂದರು.
ಲಕ್ಷ್ಮೀ ಹೆಬ್ಬಾಳಕರ್ ಶಾಸಕರಾದ ನಂತರ ಕ್ಷೇತ್ರದ ದೇವರುಗಳಿಗೆ ನೆರಳು ಸಿಕ್ಕಿದೆ. ಸರ್ವ ಜಾತಿ, ಧರ್ಮಗಳ ಮಂದಿರಗಳನ್ನೂ ಅವರು ಜೀರ್ಣೋದ್ಧಾರ ಮಾಡಿದ್ದಾರೆ. ಎಲ್ಲರೂ ಅವರನ್ನು ಆಶಿರ್ವದಿಸಿ ಮುಖ್ಯಮಂತ್ರಿ ಆಗುವಂತೆ ಮಾಡಬೇಕು ಎಂದರು.
 ಶಂಕರಗೌಡ ಪಾಟೀಲ ಮಾತನಾಡಿ, ಮುಂದಿನ ದಿನಗಳಲ್ಲಿ ಪಕ್ಷ ಭೇದ ಮರೆತು ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಬೆಂಬಲಿಸಬೇಕು ಎಂದು ಕೋರಿದರು.
 ಹಾಲಪ್ಪ ನೇಸರಗಿ, ಅಶೋಕ ಮೂಕನವರ, ಚನ್ನಬಸಪ್ಪ ರಾಚನ್ನವರ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪಾರ್ವತಿ ಅರಬಳ್ಳಿ, ಮೋಹನ ಬಡಿಗೇರ್, ಗಿರಿಜಾ ಪಾಟೀಲ, ಸಂಜಯ್ ಚಾಟೆ, ಕಾಳಪ್ಪ ಗಾಡಿವಡ್ಡರ್, ಸುರೇಶ ಪಡಗಣ್ಣವರ್ ಮುಂತಾದವರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article