ಸಂಬಳ  ನೀಡದಕ್ಕೆ ಡೆತ್ ನೋಟ್ ಬರೆದಿಟ್ಟು ಗ್ರಂಥಪಾಲಕಿ ಆತ್ಮಹತ್ಯೆ

Ravi Talawar
ಸಂಬಳ  ನೀಡದಕ್ಕೆ ಡೆತ್ ನೋಟ್ ಬರೆದಿಟ್ಟು ಗ್ರಂಥಪಾಲಕಿ ಆತ್ಮಹತ್ಯೆ
WhatsApp Group Join Now
Telegram Group Join Now

ಕಲಬುರಗಿ, ಅಕ್ಟೋಬರ್​ 13: ಕಳೆದ ಮೂರು ತಿಂಗಳನಿಂದ ಸಂಬಳ  ನೀಡದಕ್ಕೆ ಡೆತ್ ನೋಟ್ ಬರೆದಿಟ್ಟು ಗ್ರಂಥಪಾಲಕಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮದಲ್ಲಿ ನಡೆದಿದೆ. ಭಾಗ್ಯವಂತಿ (40) ಆತ್ಮಹತ್ಯೆ ಮಾಡಿಕೊಂಡ ಗ್ರಂಥಪಾಲಕಿ. ಸ್ಥಳಕ್ಕೆ ಮಳಖೇಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮಳಖೇಡ ಗ್ರಾಮ ಪಂಚಾಯತಿ ಆವರಣದಲ್ಲಿರುವ ಅರಿವು ಕೇಂದ್ರದಲ್ಲಿ ಭಾಗ್ಯವಂತಿ ಗ್ರಂಥಪಾಲಕಿಯಾಗಿ ಕೆಲಸ ಮಾಡುತ್ತಿದ್ದರು. ಕಳೆದ ಮೂರು ತಿಂಗಳನಿಂದ ಭಾಗ್ಯವಂತಿ ಅವರಿಗೆ ಸಂಬಳ ನೀಡಿರಲಿಲ್ಲ. ಹೀಗಾಗಿ ಡೆತ್ ನೋಟ್​​ನಲ್ಲಿ ಪಿಡಿಓ ಗ್ರಾಮ ಪಂಚಾಯತಿ ಅಧ್ಯಕ್ಷರ ಹೆಸರು ಉಲ್ಲೇಖಿಸಿ ಮಳಖೇಡ ಗ್ರಾಮ ಪಂಚಾಯತಿಯ ಆವರಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

WhatsApp Group Join Now
Telegram Group Join Now
Share This Article