ಒಂದೆ ಒಂದು ಸಲ..  ದಿ ಡೆವಿಲ್ ಹಾಡು ಬಿಡುಗಡೆ

Ravi Talawar
ಒಂದೆ ಒಂದು ಸಲ..  ದಿ ಡೆವಿಲ್ ಹಾಡು ಬಿಡುಗಡೆ
WhatsApp Group Join Now
Telegram Group Join Now
     ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ ‘ದಿ ಡೆವಿಲ್’ ಚಿತ್ರದ ‘ಒಂದೆ ಒಂದು ಸಲ’ ಎಂಬ ಯುಗಳ ಗೀತೆ ಬಿಡುಗಡಯಾಗಿದೆ.
      ಪ್ರಮೋದ್ ಮರವಂತೆ ಬರೆದಿರುವ ಈ ಹಾಡನ್ನು ಕಪಿಲ್ ಕಪಿಲನ್ ಹಾಗೂ ಚಿನ್ಮಯಿ ಶ್ರೀಪಾದ ಅವರು ಹಾಡಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಸಂತು ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ದರ್ಶನ್ ಹಾಗೂ ನಾಯಕಿ ರಚನ ರೈ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಹಾಡು ಸರಿಗಮಪ ಮ್ಯೂಸಿಕ್ ಚಾನಲ್ ಮೂಲಕ ಬಿಡುಗಡೆಯಾಗಿದೆ.
     ಈ ಹಾಡಿಗೂ ಮುನ್ನ ಬಿಡುಗಡೆಯಾದ ‘ಇದ್ರೆ ನೆಮ್ದಿಯಾಗ್ ಇರ್ಬೇಕ್’ ಹಾಡಂತೂ ಮಿಲಿಯನ್ ಗಟ್ಟಲೆ ವೀಕ್ಷಣೆಯಾಗಿ ಟ್ರೆಂಡಿಂಗ್ ನಲ್ಲಿದೆ. ಈ ಚಿತ್ರ ಡಿಸೆಂಬರ್ 12 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.
     ಸುಧಾಕರ್ ಎಸ್. ರಾಜ್ ಅವರ ಛಾಯಾಗ್ರಹಣವಿರುವ ‘ದಿ ಡೆವಿಲ್’ ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್  ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಸಾಹಸ ನಿರ್ದೇಶನವಿದೆ. ತಶ್ವಿನಿ ವೀರ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿರುವ ‘ದಿ ಡೆವಿಲ್’ ಚಿತ್ರಕ್ಕೆ ಕಾಂತರಾಜ್ ಎಸ್ ಎಸ್ ಸಂಭಾಷಣೆ ಬರೆದಿದ್ದಾರೆ. ಚೇತನ್ ಹಾಗೂ ತಶ್ವಿನಿ ವಸ್ತ್ರವಿನ್ಯಾಸ ಮಾಡಿದ್ದಾರೆ. ತುಳಸಿ,‌ ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು , ಶೋಭ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
WhatsApp Group Join Now
Telegram Group Join Now
Share This Article