ಯರಗಟ್ಟಿ: ತಾಲೂಕಿನ ಮಬನೂರ ಕ್ರಾಸ್ ಹತ್ತಿರ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಯರಗಟ್ಟಿ, ಗೋಕಾಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಿಂದ ಸವದತ್ತಿ, ಯರಗಟ್ಟಿ ಮಾರ್ಗವಾಗಿ ಅಥಣಿಗೆ ಹೋಗುತ್ತಿದ್ದ ಸಾರಿಗೆ ಬಸ್ ಗೆ ಹಿಂದಿನಿಂದ ವೇಗವಾಗಿ ಬಂದ್ ಟಿಪ್ಪರ್ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ ೨೦ಜನ ಪ್ರಯಾಣಿಕರಿ ಸಣ್ಣಪುಟ್ಟ ಗಾಯಗಳಾಗಿವೆ. ೭ ಜನರಿಗೆ ತೀವ್ರ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗೋಕಾಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರನ್ನು ಯರಗಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಅಪಘಾತ ಕುರಿತು ಮಾಹಿತಿ ನೀಡಿದರುಪೊಲೀಸರು, ಆಂಬುಲೆನ್ಸ್ ಸಿಬ್ಬಂದಿ ಸ್ಪಂದಿಸಿಲ್ಲ.
ಗ್ರಾಮಸ್ಥರೇ ತಮ್ಮ ಸ್ವಂತ ವಾಹನಗಳಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ತೋರಿಸಿದ್ದಾರೆ. ಆದರೆ, ಪೊಲೀಸರ ವರ್ತನೆಗೆ ಗ್ರಾಮಸ್ಥರು ಆಕ್ರೋಸ ಹೊರ ಹಾಕಿದ್ದಾರೆ.ಈ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.