ಲಂಚ ಪ್ರಕರಣದಲ್ಲಿ ಪಂಜಾಬ್ ಡಿಐಜಿ ಹರ್‌ಚರಣ್ ಸಿಂಗ್ ಬುಲ್ಲಾರ್ ಬಂಧನ; 5 ಕೋಟಿ ಹಣ, ಅಪಾರ ಮೌಲ್ಯದ ಕಾರುಗಳು, ಚಿನ್ನ ವಶಕ್ಕೆ

Ravi Talawar
ಲಂಚ ಪ್ರಕರಣದಲ್ಲಿ  ಪಂಜಾಬ್ ಡಿಐಜಿ ಹರ್‌ಚರಣ್ ಸಿಂಗ್ ಬುಲ್ಲಾರ್ ಬಂಧನ;  5 ಕೋಟಿ ಹಣ, ಅಪಾರ ಮೌಲ್ಯದ ಕಾರುಗಳು, ಚಿನ್ನ ವಶಕ್ಕೆ
WhatsApp Group Join Now
Telegram Group Join Now

ಚಂಡೀಗಢ, ಅಕ್ಟೋಬರ್ 17: ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಪಂಜಾಬ್‌ನ  ರೋಪರ್ ವಲಯ ಡಿಐಜಿ ಹರ್‌ಚರಣ್ ಸಿಂಗ್ ಬುಲ್ಲಾರ್​ರನ್ನು  ಸಿಬಿಐ ಗುರುವಾರ ಬಂಧಿಸಿದೆ. ಅವರ ನಿವಾಸದಿಂದ ಅಪಾರ ಪ್ರಮಾಣದ ನಗದು, ಚಿನ್ನಾಭರಣ, ಕಂತೆ ಕಂತೆ ನೋಟುಗಳು, ವಜ್ರ, ಚಿನ್ನದ ಆಭರಣಗಳು, ಉತ್ಕೃಷ್ಟ ವಾಚ್​​ಗಳು ಸೇರಿದಂತೆ ಸಂಪತ್ತಿನ ಖಜಾನೆಯನ್ನೇ ವಶಕ್ಕೆ ಪಡೆದುಕೊಂಡಿದೆ. 8 ಲಕ್ಷ ರೂ. ಲಂಚ ಪ್ರಕರಣವೊಂದರಲ್ಲಿ ಅಖಾಡಕ್ಕಿಳಿದ ಸಿಬಿಐ, ಭ್ರಷ್ಟ ಐಪಿಎಸ್ ಅಧಿಕಾರಿಯ ಸಂಪತ್ತಿನ ಖಜಾನೆ ಕಂಡು ನಿಬ್ಬೆರಗಾಗಿದೆ.

ಹರ್‌ಚರಣ್ ಸಿಂಗ್ ಬುಲ್ಲಾರ್ 2009ರ ಬ್ಯಾಚ್‌ನ ಐಪಿಎಸ್ ಅಧಿಕಾರಿ. ಪಂಜಾಬ್‌ನ ರೋಪರ್ ವಲಯದಲ್ಲಿ ಡಿಐಜಿಯಾಗಿದ್ದಾರೆ. 8 ಲಕ್ಷ ರೂಪಾಯಿ ಲಂಚ ಪಡೆದ ಆರೋಪದಲ್ಲಿ ಸಿಬಿಐಗೆ ಬಲೆಗೆಬಿದ್ದಿದ್ದಾರೆ. ಇವರ ಜೊತೆ ಮಧ್ಯವರ್ತಿ ಕೃಷ್ಣ ಎಂಬಾತನನ್ನು ಬಂಧಿಸಲಾಗಿದೆ. ಆಕಾಶ್ ಬಟ್ಟಾ ಎಂಬ ಸ್ಕ್ರ್ಯಾಪ್ ವ್ಯಾಪಾರಿ ವಿರುದ್ಧ ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಮಧ್ಯವರ್ತಿ ಮೂಲಕ ಲಂಚ ಪಡೆಯುವ ವೇಳೆ ಲಾಕ್ ಆಗಿದ್ದಾರೆ. 8 ಲಕ್ಷ ರೂ. ಲಂಚ ಕೊಡದಿದ್ದರೆ ಕ್ರಿಮಿನಲ್ ಕೇಸ್ ಜೊತೆ ಉದ್ಯಮಕ್ಕೆ ತೊಂದರೆ ಎದುರಿಸಬೇಕಾಗುತ್ತದೆ ಎಂದು ಡಿಐಜಿ ಬೆದರಿಸಿದ್ದರು. ಈ ಬಗ್ಗೆ ಉದ್ಯಮಿ ಆಕಾಶ್ ಸಿಬಿಐಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದಲ್ಲಿ ಅಖಾಡಕ್ಕಿಳಿದ ಸಿಬಿಐ ಅಧಿಕಾರಿಗಳು, ಲಂಚ ಪಡೆಯುವ ವೇಳೆ ರೆಡ್‌ಹ್ಯಾಂಡಾಗಿ ಡಿಐಜಿ ಹರ್‌ಚರಣ್‌ರನ್ನು ಬಂಧಿಸಿದೆ.

WhatsApp Group Join Now
Telegram Group Join Now
Share This Article