ಧಾರವಾಡ: ಗಡಿನಾಡಿನಲ್ಲಿ ಕನ್ನಡ ಜಾಗೃತಿ ಮತ್ತು ಸಾಂಸ್ಕೃತಿಕ ಸಂಭ್ರಮ ಅಕ್ಟೋಬರ್ 18 ರಂದು ಬೆಳಿಗ್ಗೆ 10 ಗಂಟೆಗೆ ಬೆಳಗಾವಿಯ ಎಸ್.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಶಿವಕುಮಾರ ಸಂಬರಗಿಮಠ ಸಭಾಭವನದಲ್ಲಿ ಏರ್ಪಡಿಸಲಾಗಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ವತಿಯಿಂದ ಬೆಳಗಾವಿ ನಾಗನೂರು ರುದ್ರಾಕ್ಷಿಮಠದ ಸಹಕಾರದಲ್ಲಿ ಆಯೋಜಿಸಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಸಚಿವ ಎಚ್.ಕೆ ಪಾಟೀಲ ನೇರವೇರಿಸಲಿದ್ದಾರೆ. ಸಾನಿಧ್ಯವನ್ನು ಗದಗ ಡಂಬಳದ ಡಾ. ಸಿದ್ಧರಾಮ ಸ್ವಾಮೀಜಿ ವಹಿಸಲಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಸಂಘದ ವಾರ್ಷಿಕ ವರದಿ ಬಿಡುಗಡೆ ಮಾಡಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಂಘದ ಪರಿಚಯದ ಕಿರುಹೊತ್ತಿಗೆ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ್, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಡಾ.ದ.ರಾ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ. ಸರಜು ಕಾಟ್ಕರ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಆಸಿಫ್ ಸೇಠ್ ವಹಿಸುವರು. ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್ ಚೆನ್ನೂರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಅಶೋಕ ಚಂದರಗಿ ಭಾಗವಹಿಸಲಿದ್ದಾರೆ.
ಅದರಂತೆ ಗಡಿನಾಡ ಕನ್ನಡಿಗರ ಸಮಸ್ಯೆಗಳು ಮತ್ತು ಸವಾಲುಗಳು ಒಂದು ಅವಲೋಕನ ವಿಚಾರ ಸಂಕಿರಣವನ್ನು ಮದ್ಯಾಹ್ನ 12 ಗಂಟೆಗೆ ನಡೆಯಲಿದೆ. ಮದ್ಯಾಹ್ನ 2 ಗಂಟೆಗೆ ಕವಿಗೋಷ್ಠಿ ನಡೆಯಲಿದೆ. ಸಂಜೆ 4: 15 ಗಂಟೆಗೆ ಸಾಧಕರಿಗೆ ಸನ್ಮಾನ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರೋಪ ಸಮಾರಂಭ ಸಾನ್ನಿಧ್ಯವನ್ನು ಬೆಳಗಾವಿಯ ಡಾ. ಅಲ್ಲಮಪ್ರಭು ಸ್ವಾಮೀಜಿ ವಹಿಸಲಿದ್ದಾರೆ. ಸಾಹಿತಿ ಡಾ.ಬಸವರಾಜ ಜಗಜಂಪಿ, ಡಾ. ಬಸವರಾಜ ಕಟ್ಟೀಮನಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ.ವಾಯ್.ಬಿ. ಹಿಮ್ಮಡಿ, ಡಾ.ಬೇಟಗೇರಿ ಕೃಷ್ಣಶರ್ಮಾ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷೆ ಡಾ.ವಿನಯಾ ಒಕ್ಕುಂದ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಪರಿಸರ ಹೋರಾಟಗಾರ ಶಿವಾಜಿ ಕಾಗಣಿಕರ, ಸಣ್ಣಾಟ ಕಲಾವಿದೆ ಲಕ್ಷ್ಮೀಬಾಯಿ ನೀಲಪ್ಪನವರ, ಸಮಾಜ ಸೇವಕಿ ಕವಿತಾ ಕಾಂಬಳೆ, ಶಿಕ್ಷಣ ಕ್ಷೇತ್ರದಲ್ಲಿ ಶಾಂತಾದೇವಿ ಹಾಲಪ್ಪನವರ, ಸಾಹಿತ್ಯ ಕ್ಷೇತ್ರದಲ್ಲಿ ನೀಲಗಂಗಾ ಚರಂತಿಮಠ, ರಂಗಭೂಮಿ ಕ್ಷೇತ್ರದಲ್ಲಿ ಬಿ.ಎಸ್ ಗವಿಮಠ, ದಲಿತ ಚಳುವಳಿ ಕಲ್ಲಪ್ಪ ಕಾಂಬಳೆ, ಸಾಹಿತ್ಯ ಕ್ಷೇತ್ರದಲ್ಲಿ ಡಾ. ಹೇಮಾ ಸೋನೋಳಿ, ಸಾಂಸ್ಕೃತಿಕ ಸಂಘಟನೆ ಕ್ಷೇತ್ರದಲ್ಲಿ ಎಸ್.ಡಿ ಕರ್ಕಿ, ಸಾಹಿತ್ಯ ಕ್ಷೇತ್ರದಲ್ಲಿ ಎಸ್.ರಾ ಸುಳಕೊಡೆ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಎಂ.ಎಂ ಸಂಗಣ್ಣನವರ್, ಕನ್ನಡ ಕಾಯಕ ಕ್ಷೇತ್ರದಲ್ಲಿ ವಿಜಯ ಬಡಿಗೇರ ಹಾಗೂ ಆನಂದ್ಯ ಪುರಾಣಿಕ ಅವರ ಸಾಧನೆಗೆ ಸನ್ಮಾನಿಸಿ ಗೌರವಿಸಲಾಗುವುದು.
ಗಡಿನಾಡ ಕನ್ನಡಪರ ಹೋರಾಟಗಾರರಾದ ದೀಪಕ ಗುಡಗನಟ್ಟಿ, ಮಹಾದೇವ ತಳವಾರ, ಮಹಾಂತೇಶ ರಣಗಟ್ಟಿಮಠ, ಅನಂತ ಬ್ಯಾಕೋಡ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ವೀರಣ್ಣ ವಡ್ಡಿನ, ಜೀನದತ್ತ ಹಡಗಲಿ, ಶಿವಾನಂದ, ವಿಶ್ವೇಶ್ವರಿ ಹಿರೇಮಠ, ಧನವಂತ ಹಾವಜಗೋಳ, ಸತೀಶ ತುರಮರಿ ಸೇರಿದಂತೆ ಇತರರಿದ್ದರು.