ಲಖನೌ: ಆತ್ಮನಿರ್ಭರ ಭಾರತ್’ ಮಿಷನ್ ಅಡಿಯಲ್ಲಿ ಶನಿವಾರ ಲಕ್ನೋದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್ಗೆ ಹಸಿರು ನಿಶಾನೆ ತೋರಿದರು. ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಘೋಷಿಸಿದಂತೆ, ಹೊಸ ಬ್ಯಾಚ್ ಬ್ರಹ್ಮೋಸ್ ಕ್ಷಿಪಣಿಗಳನ್ನು ಲಕ್ನೋದ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಿಸಲಾಗಿದೆ. ಇದು ಉತ್ತರ ಪ್ರದೇಶ ರಕ್ಷಣಾ ಕೈಗಾರಿಕಾ ಕಾರಿಡಾರ್ (ಯುಪಿಡಿಐಸಿ) ಗೆ ಒಂದು ಮೈಲಿಗಲ್ಲು ಮಾತ್ರವಲ್ಲದೆ, ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಭಾರತದ ಸಂಕಲ್ಪಕ್ಕೆ ಹೊಸ ಶಕ್ತಿಯನ್ನು ಒದಗಿಸುತ್ತದೆ.