ಬೆಳಗಾವಿ: ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ 7 ನಿರ್ದೇಶಕರ ಆಯ್ಕೆಗೆ ಇಂದು ಬೆಳಗ್ಗೆ 9 ಗಂಟೆಗೆ ಮತದಾನ ಶುರುವಾಗಿದೆ. 7 ಕ್ಷೇತ್ರದ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಮತದಾನ ಮಾಡುತ್ತಿದ್ದಾರೆ.
ನಗರದ ಬಿ.ಕೆ.ಮಾಡೆಲ್ ಹೈಸ್ಕೂಲ್ನಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 9 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಒಂದೊಂದು ತಂಡವಾಗಿ ಮತದಾರರು ಮತಗಟ್ಟೆಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.
ಒಟ್ಟು 676 ಮತದಾರರು: ಅಥಣಿ ತಾಲೂಕಿನಿಂದ 125 ಅರ್ಹ ಮತದಾರರಿದ್ದು, ಬೈಲಹೊಂಗಲ 73, ಹುಕ್ಕೇರಿ 90, ಕಿತ್ತೂರು 29, ನಿಪ್ಪಾಣಿ 119, ರಾಯಬಾಗ 205 ಹಾಗೂ ರಾಮದುರ್ಗ 105 ಮತದಾರರು ಸೇರಿ ಒಟ್ಟು 676 ಮತದಾರರಿದ್ದಾರೆ.