ಬಳ್ಳಾರಿ:19. ಪತ್ರಿಕೋದ್ಯಮ, ಸಾಮಾಜಿಕ ಮತ್ತು ಶೈಕ್ಷಣಿಕ ಹಾಗೂ ಉದ್ಯಮಿ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ 2025ನೇ ಸಾಲಿನ ‘ಕರ್ನಾಟಕ ವಾಲ್ಮೀಕಿ ರತ್ನ’ ಪ್ರಶಸ್ತಿಗೆ ಅಖಂಡ ಕರ್ನಾಟಕ ವಾಲ್ಮೀಕಿ ನಾಯಕರ ಒಕ್ಕೂಟದ ರಾಜ್ಯಾಧ್ಯಕ್ಷರು ಆಗಿರುವ ವಕೀಲ ಬಳ್ಳಾರಿಯ ಜೋಳದರಾಶಿ ತಿಮ್ಮಪ್ಪ ಆಯ್ಕೆಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮೇಳೇಕೋಟೆ ಕ್ರಾಸ್ ಬಳಿರುವ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಸಮುದಾಯ ಭವನದಲ್ಲಿ ಇದೇ ಅ.26ರಂದು ‘ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ’ ಪ್ರದಾನ ಸಮಾರಂಭವು ದೊಡ್ಡಬಳ್ಳಾಪುರ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಹಾಗೂ ಕರ್ನಾಟಕ ವಾಲ್ಮೀಕಿ ನೌಕರರ ಒಕ್ಕೂಟ ವತಿಯಿಂದ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಿ ಗೌರವಿಸಲಿದ್ದಾರೆ.
ದೊಡ್ಡಬಳ್ಳಾಪುರದ ಶ್ರೀ ಮಹರ್ಷಿ ವಾಲ್ಮೀಕಿ ಗುರು ಪೀಠಾಧ್ಯಕ್ಷರಾದ ವಾಲ್ಮೀಕಿ ಬ್ರಹ್ಮಾನಂದ ಗುರೂಜಿ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ವಹಿಸಲಿದ್ದಾರೆ ಎಂದು ದೊಡ್ಡಬಳ್ಳಾಪುರದ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠವು ಪ್ರಕಟಣೆಯಲ್ಲಿ ತಿಳಿಸಿದೆ.