ಬಡ ವ್ಯಾಪಾರಿಗಳು ಜೀವನೋಪಾಯ ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ: ಎಸ್. ದೇವಾನಂದ

Ravi Talawar
ಬಡ ವ್ಯಾಪಾರಿಗಳು ಜೀವನೋಪಾಯ ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ: ಎಸ್. ದೇವಾನಂದ
WhatsApp Group Join Now
Telegram Group Join Now
ಬಳ್ಳಾರಿ, ಅ.19..:ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪಿ.ಎಂ.ಸ್ವಾನಿಧಿ ಯೋಜನೆಯಡಿ ಅರ್ಜಿಗಳನ್ನು ಸಲ್ಲಿಸಲು ಬಂದಿರುವ ಬಡ ರಸ್ತೆಬದಿಯ ವ್ಯಾಪಾರಿಗಳಿಗೆ ತಾಂತ್ರಿಕ ಅಡೆತಡೆಗಳಿಂದ ತೀವ್ರ ತೊಂದರೆ ಉಂಟಾಗಿದೆ. ಆನ್‌ಲೈನ್ ಪೋರ್ಟಲ್‌ನಲ್ಲಿ ಲಾಗಿನ್ ಆಗುತ್ತಿಲ್ಲವೆಂಬ ಕಾರಣ ನೀಡಿ ಹಲವಾರು ದಿನಗಳಿಂದ ಅರ್ಜಿದಾರರನ್ನು ವಾಪಸ್ ಕಳುಹಿಸುತ್ತಿರುವ ಕುರಿತು ಕಾರ್ಮಿಕ ಶಕ್ತಿ ಸಂಘಟನೆಯು ಗಂಭೀರ ಅಸಮಾಧಾನ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷ ಎಸ್. ದೇವಾನಂದ ಅವರ ನೇತೃತ್ವದಲ್ಲಿ ಸಂಘಟನೆಯ ಪ್ರತಿನಿಧಿಗಳು ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಿದರು.
ಮನವಿಯಲ್ಲಿ ಅವರು, “ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಪಿ.ಎಂ.ಸ್ವಾನಿಧಿ ಯೋಜನೆ ಯಶಸ್ವಿಯಾಗಿ ಜಾರಿಯಾಗುತ್ತಿದ್ದರೂ, ಬಳ್ಳಾರಿಯಲ್ಲಿ ಮಾತ್ರ ಕಳೆದ ಕೆಲವು ತಿಂಗಳುಗಳಿಂದ ಯೋಜನೆ ಅಸಮರ್ಪಕವಾಗಿ ನಡೆಯುತ್ತಿದೆ. ಇದರಿಂದ ಬಡ ವ್ಯಾಪಾರಿಗಳು ಜೀವನೋಪಾಯ ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ,” ಎಂದು ತಿಳಿಸಿದ್ದಾರೆ.
ಯೋಜನೆಯ ಉದ್ದೇಶ ಬಡ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ ಒದಗಿಸುವುದಾದರೆ, ತಾಂತ್ರಿಕ ಕಾರಣಗಳಿಂದ ಅರ್ಜಿಗಳನ್ನು ಸ್ವೀಕರಿಸದಿರುವುದು ಯೋಜನೆಯ ಉದ್ದೇಶವನ್ನೇ ಹಾಳುಮಾಡುತ್ತಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಎಂದು ಕರ್ನಾಟಕ ರಾಜ್ಯ ಕಾರ್ಮಿಕ ಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷ ಎಸ್. ದೇವಾನಂದ ತಿಳಿಸಿದರು.
ಈ ಸಂದರ್ಭದಲ್ಲಿ ವಿಶ್ವನಾಥ,ಹುಸೇನಪ್ಪ,ಹೊನ್ನಪ್ಪ,ಬಸಪ್ಪ, ವಿನಯ್,ರಾಜೇಶ್, ಸೇರಿದಂತೆ ಇನ್ನಿತರರಿದ್ದರು.
WhatsApp Group Join Now
Telegram Group Join Now
Share This Article