ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ದರೆ ಮತ್ತಷ್ಟು ಸುಂಕ: ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Ravi Talawar
ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ದರೆ ಮತ್ತಷ್ಟು ಸುಂಕ: ಭಾರತಕ್ಕೆ ಟ್ರಂಪ್‌ ಎಚ್ಚರಿಕೆ
WhatsApp Group Join Now
Telegram Group Join Now

ವಾಷಿಂಗ್ಟನ್, ಅಕ್ಟೋಬರ್ 20: ದೀಪಾವಳಿಯಂದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಸುಂಕಗಳ ಬಗ್ಗೆ ಬಲವಾದ ಎಚ್ಚರಿಕೆ ರವಾನಿಸಿದ್ದಾರೆ.  ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವವರೆಗೂ ಭಾರತ ಭಾರಿ ಸುಂಕ ಪಾವತಿಸಬೇಕು ಎಂದು ಟ್ರಂಪ್ ಹೇಳಿದ್ದಾರೆ. ಭಾರತ ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸದಿದ್ದರೆ, ಮತ್ತಷ್ಟು ಸುಂಕಗಳನ್ನು ಪಾವತಿಸಲು ಸಿದ್ಧರಾಗಿರಿ ಎಂದು ಪುನರುಚ್ಚರಿಸಿದ್ದಾರೆ.

ಒನ್‌ಫೋರ್ಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ತನ್ನ ಷರತ್ತುಗಳಿಗೆ ಒಪ್ಪದಿದ್ದರೆ ಭಾರೀ ಸುಂಕ ವಿಧಿಸುವುದಾಗಿ ಹೇಳಿದರು. ರಷ್ಯಾದ ತೈಲ ಖರೀದಿಸುವ ವಿಷಯದ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿದ್ದೇನೆ ಎಂದು ಅವರು ಹೇಳಿದರು.

WhatsApp Group Join Now
Telegram Group Join Now
Share This Article