ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ಖಂಡಿಸಿ ಗೋಕಾಕನಲ್ಲಿ ಪ್ರತಿಭಟನೆ

Ravi Talawar
ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ಖಂಡಿಸಿ ಗೋಕಾಕನಲ್ಲಿ ಪ್ರತಿಭಟನೆ
WhatsApp Group Join Now
Telegram Group Join Now

ಬೆಳಗಾವಿ, ಅಕ್ಟೋಬರ್ 20: ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆ, ಬೆಳಗಾವಿ ಜಿಲ್ಲೆ ಗೋಕಾಕ್​ ಪಟ್ಟಣದ​ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆದಿದೆ. ವಾಲ್ಮೀಕಿ ಸಮಾಜದ ಮುಖಂಡರ ನೇತೃತ್ವದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಘೋಷಣೆ ಕೂಗಿ ಬೃಹತ್ ಪ್ರತಿಭಟನೆ ನಡೆದಿದ್ದು, ಮಾನವ ಸರಪಳಿ ಮಾಡಿ ಟೈಯರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ಅಷ್ಟೇ ಅಲ್ಲದೇ ರಮೇಶ್ ಕತ್ತಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ತಕ್ಷಣವೇ ಅವರ ಬಂಧನ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಕೇವಲ ಬೆಳಗಾವಿ ಮಾತ್ರವಲ್ಲದೇ ಕೊಪ್ಪಳ, ರಾಯಚೂರಿನಲ್ಲೂ ಇದೇ ರೀತಿಯ ಹೋರಾಟ ನಡೆದಿದೆ.

WhatsApp Group Join Now
Telegram Group Join Now
Share This Article