ಬೆಂಗಳೂರು, ಅಕ್ಟೋಬರ್ 23: ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ, ಒಂದು ದಿನ ಬಿಡುವು ಕೊಟ್ಟರೆ ಮರುದಿನವೇ ಮತ್ತೆ ಮಳೆ ಶುರುವಾಗುತ್ತಿದೆ. ಈಗ ಮತ್ತೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 29ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಕುಮಟಾ, ಮಂಕಿ, ಬಂಟವಾಳ, ಬೆಳ್ತಂಗಡಿ, ಗಂಗಾವತಿ, ಕದ್ರಾ, ಕಾರ್ಕಳ, ಮಂಗಳೂರು, ಮೂಡುಬಿದಿರೆ, ಸೈದಾಪುರ, ತಾವರಗೇರಾ, ಯಗಟಿ, ಬೆಳ್ಳೂರು, ದಾವಣಗೆರೆ, ಧರ್ಮಸ್ಥಳ, ಕೋಟಾ, ಕುಷ್ಟಗಿ, ಪೊನ್ನಂಪೇಟೆ, ಕೋಲಾರ, ಗುಬ್ಬಿ, ಶಕ್ತಿನಗರ, ಸಿದ್ದಾಪುರ, ಭರಮಸಾಗರ, ಚನ್ನಗಿರಿಯಲ್ಲಿ ಮಳೆಯಾಗಿದೆ.
ಚಿಕ್ಕಬಳ್ಳಾಪುರ, ಹಿರಿಯೂರು, ಹೊನ್ನಾವರ, ಹೊಸದುರ್ಗಾ, ಎಚ್ಡಿಕೋಟೆ, ಹಗರಿಬೊಮ್ಮನಹಳ್ಳಿ, ಇಂಡಿ,ಹೊಸದುರ್ಗ, ಕಿಬ್ಬನಹಳ್ಳಿ, ಕುಣಿಗಲ್, ಮಾಗಡಿ, ನಾಗಮಂಗಲ, ಶಿವಮೊಗ್ಗ, ಟಿಜಿ ಹಳ್ಳಿ, ತಿಪಟೂರು, ಯಡ್ರಾಮಿಯಲ್ಲಿ ಮಳೆಯಾಗಿದೆ.
ಕಾರವಾರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 20 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದೆ.
ಎಚ್ಎಎಲ್ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.