ಅರ್ಹ ಪದವೀಧರರು ಮತಪಟ್ಟಿಯಿಂದ ಹೊರಗುಳಿಯದಂತೆ ಜಾಗೃತಿವಹಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

Ravi Talawar
ಅರ್ಹ ಪದವೀಧರರು ಮತಪಟ್ಟಿಯಿಂದ ಹೊರಗುಳಿಯದಂತೆ ಜಾಗೃತಿವಹಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು
WhatsApp Group Join Now
Telegram Group Join Now
ಧಾರವಾಡ : ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಧಾರವಾಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ  ಹೆಸರು ಸೇರ್ಪಡೆ ಮಾಡಿಕೊಳ್ಳಲು ಮತದಾರರ ಜಾಗೃತಿಗಾಗಿ ಅಗತ್ಯ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಪಶ್ಚಿಮ ಪದವೀಧರ ಕ್ಷೇತ್ರದ ಧಾರವಾಡ ಜಿಲ್ಲಾ ಸಹಾಯಕ ಮತದಾರರ  ನೋಂದಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
  ಜಿಲ್ಲಾಧಿಕಾರಿಗಳ ಕಚೇರಿ ಸಭಾಗಂಣದಲ್ಲಿ ಜರುಗಿದ ಪಶ್ಚಿಮ ಪದವೀಧರ ಮತಕ್ಷೇತ್ರದ ಮತದಾರರ ನೋಂದಣಿಗೆ ಸಂಬಂಧಿಸಿದಂತೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿ, ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ, ಮಾತನಾಡಿದರು.
ಸಹಾಯಕ ಮತದಾರರ ನೋಂದಣಾಧಿಕಾರಿಗಳು ಮತ್ತು ನಿಯೋಜಿತ ಅಧಿಕಾರಿಗಳು ಮತದಾರರ ಪಟ್ಟಿಗೆ ಸೇರಲು ಅರ್ಹ ಮತದಾರರನ್ನು ಗುರುತಿಸಿ, ಶೀಘ್ರವಾಗಿ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಕ್ರಮವಹಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿನ ಶಿಕ್ಷಕರು ಪದವೀಧರಿದ್ದರೆ, ಅಂತಹ ಶಿಕ್ಷರು ಅರ್ಜಿಗಳನ್ನು ಭರ್ತಿ ಮಾಡುವಂತೆ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮವಹಿಸಬೇಕು ಎಂದು ಅವರು ಹೇಳಿದರು.
ತಹಸೀಲ್ದಾರರು ಜಿಲ್ಲೆಯಲ್ಲಿರುವ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಿ, ಎಲ್ಲ ಪದವೀಧರರಿಗೆ ಚುನಾವಣೆಯ ಬಗ್ಗೆ ಮಾಹಿತಿ ನೀಡಿ, ವಿಶ್ವವಿದ್ಯಾಲಯಗಳಲ್ಲಿನ ಪದವೀಧರನ್ನು ಸಂಪರ್ಕಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಉಪ ವಿಭಾಗಾಧಿಕಾರಿ ಶಾಲಂ ಹುಸೇನ,  ಎಲ್ಲಾ ತಾಲೂಕುಗಳ ತಶೀಲ್ದಾರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article