ನವದೆಹಲಿ, ಅಕ್ಟೋಬರ್ 29: ಇತ್ತೀಚಿನ ದಿನಗಳಲ್ಲಿ ಮ್ಯಾನ್ಮಾರ್‌ನಿಂದ (Myanmar) ಥೈಲ್ಯಾಂಡ್‌ಗೆ ಬಂದ ನಂತರ ಹಲವಾರು ಭಾರತೀಯ ಪ್ರಜೆಗಳನ್ನು ಥಾಯ್ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯ ದೃಢಪಡಿಸಿದೆ. ಬಂಧಿತರ ಗುರುತನ್ನು ತಿಳಿಯಲು ಮತ್ತು ಅಗತ್ಯ ಕಾರ್ಯವಿಧಾನಗಳು ಪೂರ್ಣಗೊಂಡ ನಂತರ ಅವರು ಸುರಕ್ಷಿತವಾಗಿ ಮರಳುವುದನ್ನು ಖಚಿತಪಡಿಸಿಕೊಳ್ಳಲು ಥೈಲ್ಯಾಂಡ್‌ನಲ್ಲಿರುವ ಭಾರತೀಯ ಮಿಷನ್ ಸ್ಥಳೀಯ ಅಧಿಕಾರಿಗಳೊಂದಿಗೆ ಸಕ್ರಿಯವಾಗಿ ಸಮನ್ವಯ ಸಾಧಿಸುತ್ತಿರುವುದಾಗಿ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
“ಥೈಲ್ಯಾಂಡ್‌ನಲ್ಲಿರುವ ನಮ್ಮ ಮಿಷನ್ ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಲು ಮತ್ತು ಥೈಲ್ಯಾಂಡ್‌ನಲ್ಲಿ ಅಗತ್ಯ ಕಾನೂನು ಔಪಚಾರಿಕತೆಗಳು ಪೂರ್ಣಗೊಂಡ ನಂತರ ಅವರನ್ನು ವಾಪಸ್ ಕಳುಹಿಸಲು ಥಾಯ್ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ರಣಧೀರ್ ಜೈಸ್ವಾಲ್ ಹೇಳಿದ್ದಾರೆ.


