ಪಾಟ್ನಾ, ಅಕ್ಟೋಬರ್ 31: ಬಿಹಾರ ವಿಧಾನಸಭಾ ಚುನಾವಣೆ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಎನ್ಡಿಎ ಇಂದು ಪ್ರಣಾಳಿಕೆ(Manifesto)ಯನ್ನು ಬಿಡುಗಡೆ ಮಾಡಿದೆ. ಜೆಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಪ್ರಣಾಳಿಕೆಯಲ್ಲಿ ಏನಿದೆ ಎಂದು ನೋಡುವುದಾದರೆ ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್, ನಾಲ್ಕು ನಗರಗಳಿಗೆ ಮೆಟ್ರೋ ವಿಸ್ತರಣೆ ಸೇರಿ ಹಲವು ಭರವಸೆಗಳನ್ನು ಎನ್ಡಿಎ ನೀಡಿದೆ.
ಒಂದು ಕೋಟಿ ಸರ್ಕಾರಿ ನೌಕರರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಮಹಿಳಾ ರೋಜಗಾರ್ ಯೋಜನೆ ಜಾರಿಗೊಳಿಸಲಾಗುತ್ತದೆ. ಈ ಯೋಜನೆಯಡಿ ಮಹಿಳೆಯರಿಗೆ 2 ಲಕ್ಷದವರೆಗೆ ಸಹಾಯ ಮಾಡಲಾಗುತ್ತದೆ. ಅತಿ ಹಿಂದುಳಿದ ವರ್ಗದವರಿಗೆ 10 ಲಕ್ಷದವರೆಗೆ ಹಣ ಸಹಾಯ ಮಾಡಲಾಗುತ್ತದೆ. 1 ಕೋಟಿ ಮಹಿಳೆಯರನ್ನು ಲಖ್ಪತಿ ದೀದಿಯನ್ನಾಗಿ ಮಾಡುತ್ತೇವೆಂದು ಭರವಸೆ ನೀಡಿದ್ದಾರೆ.

 
		 
		 
		
