ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಕನ್ನಡ ಧ್ವಜಾರೋಹಣ

Ravi Talawar
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಕನ್ನಡ ಧ್ವಜಾರೋಹಣ
WhatsApp Group Join Now
Telegram Group Join Now
ಬಳ್ಳಾರಿ, ನ. 03:  ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಕನ್ನಡತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಹೂ ಮಾಲೆಯನ್ನು ಹಾಕಿ, ಪುಷ್ಪಾರ್ಚನೆ ಸಲ್ಲಿಸಿ 70ನೇ ಕನ್ನಡ ರಾಜ್ಯೋತ್ಸವವನ್ನು ಶನಿವಾರ ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಅವರು, ಕನ್ನಡ ಧ್ವಜಾರೋಹಣ ನೆರವೇರಿಸಿ, ದಕ್ಷಿಣ ಭಾರತದಲ್ಲಿಯ ಕನ್ನಡ ಭಾಷಿಕರು ಮತ್ತು ಕನ್ನಡ ಪ್ರಾಂತಗಳನ್ನು ಒಗ್ಗೂಡಿಸಿದ ದಿನ. ಮೈಸೂರು ಪ್ರಾಂತವನ್ನು `ಕರ್ನಾಟಕ’ ಎಂದು ನಾಮಕರಣಗೊಂಡ ಈ ದಿನವನ್ನು ಕನ್ನಡ ರಾಜ್ಯೋತ್ಸವವನ್ನಾಗಿ ನಾಡಿನಾದ್ಯಂತ ಅದ್ದೂರಿಯಾಗಿ ಆಚರಿಸಲಾಗುತ್ತದೆ ಎಂದರು.
ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು, ಹಿರಿಯ ಉಪಾಧ್ಯಕ್ಷ ಅವ್ವಾರು ಮಂಜುನಾಥ, ಉಪಾಧ್ಯಾಕ್ಷರಾದ ಎಸ್. ದೊಡ್ಡನಗೌಡ, ಸೊಂತ ಗಿರಿಧರ, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೆಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ, ನಿಕಟಪೂರ್ವ ಅಧ್ಯಕ್ಷರಾದ ಬಿ.ಮಹಾರುದ್ರಗೌಡ,  ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article