ಕೊಪ್ಪಳ: ರಾಜ್ಯ ರಾಜಕೀಯ ವಲಯದಲ್ಲಿ ಸಿಎಂ ಬದಲಾವಣೆ ಕುರಿತ ಚರ್ಚೆಗಳು ಜೋರಾಗುತ್ತಿದ್ದಂತೆಯೇ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕೊಪ್ಪಳದಲ್ಲಿಸ್ಪಷ್ಟನೆ ನೀಡಿದ್ದಾರೆ. ಸಿಎಂ ಕರ್ಚಿ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿಯವರ ಕುರ್ಚಿ ಖಾಲಿ ಇಲ್ಲ, 2028ರವರೆಗೆ ಸಿದ್ದರಾಮಯ್ಯನೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಒಮ್ಮತದ ಸಂದೇಶ ರವಾನಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಕುರಿತು ಮಾತನಾಡುತ್ತಾ, ಪಕ್ಷವನ್ನು ಅಧಿಕಾರಕ್ಕೆ ತರಲು ಡಿ.ಕೆ. ಶಿವಕುಮಾರ್ ಅವರ ಪಾತ್ರ ಅತ್ಯಂತ ಮಹತ್ವದ್ದು. ಮುಂದೆ ಅವರು ಸಿಎಂ ಆಗಲಿ ಎಂಬ ಆಸೆ ನನಗೂ ಇದೆ. ಆದರೆ ಈಗ ಸಿಎಂ ಹುದ್ದೆ ಖಾಲಿ ಇಲ್ಲ. ಅಲ್ಲದೆ, ಕೆಪಿಸಿಸಿ ಅಧ್ಯಕ್ಷರ ಹುದ್ದೆಯೂ ಖಾಲಿ ಇಲ್ಲ ಎಂದಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದಿನ ಚುನಾವಣೆಗೆ ಹೋಗುತ್ತೇವೆ ಎಂದು ಡಿ.ಕೆ. ಸುರೇಶ್ ಹೇಳಿದ್ದಾರೆ. ಸಿಎಂ ಬದಲಾವಣೆಯ ಬಗ್ಗೆ ಯಾವುದೇ ನಿರ್ಧಾರ ಹೈಕಮಾಂಡ್ನ ಕೈಯಲ್ಲಿದೆ ಎಂದು ಜಮೀರ್ ಹೇಳಿದ್ರು.


